Rajesh Naik

ನ. 11 ರಂದು ಬಂಟ್ವಾಳದಲ್ಲಿ ಪರಿವರ್ತನಾ ಯಾತ್ರೆ : ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ

ನವೆಂಬರ್ 11 ರಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿ.ಸಿ. ರೋಡಿನಲ್ಲಿ ನಡೆಯುವ ನವಕರ್ನಾಟಕ ಪರಿವರ್ತನಾ ಯಾತ್ರೆಯ ಅಂಗವಾಗಿ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ನಡೆಯಿತು. ಬಿ.ಸಿ. ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿಯಿರುವ ಮೈದಾನದಲ್ಲಿ ನಡೆಯುವ ನವಕರ್ನಾಟಕ ಪರಿವರ್ತನಾ ಯಾತ್ರೆಗೆ ಚಪ್ಪರ ಮುಹೂರ್ತವನ್ನು ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದ ಬಳಿಕ ಚಪ್ಪರ ಮುಹೂರ್ತ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

parivartanan-yatre-bantwala-2

parivartanan-yatre-bantwala-1

Back To Top