ಬಂಟ್ವಾಳ: ಅಭಿವೃದ್ಧಿಯಲ್ಲಿ ರಾಜಕೀಯ ಬೇಡ ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡೋಣ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ತಾ.ಪಂ.ಎಸ್ ಜಿ.ಅರ್.ಎಸ್.ವೈ ಸಭಾಂಗಣದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಟಾಸ್ಕ್ ಫೋರ್ಸ್ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅನುದಾನಗಳ ಹಂಚಿಕೆಯನ್ನು ಪ್ರತಿ ಸದಸ್ಯನಿಗೆ ಸಮಾನವಾಗಿ ಮಾಡುತ್ತೇನೆ, ಯಾವುದೇ ತಾರತಮ್ಯವನ್ನು ಮಾಡುವುದಿಲ್ಲ. ಅನುದಾನದ ಹಂಚಿಕೆಯನ್ನು ಅಗತ್ಯತೆ ಮತ್ತು ಆದ್ಯತೆಯ ಮೇಲೆ ಸಮಾನಾಗಿ ಹಂಚಲು ಎಲ್ಲರ ಸಹಕಾರ ಬೇಕು ಎಂದು ಹೇಳಿದರು. ವಿಧಾನ ಸಭಾ ಕ್ಷೇತ್ರಕ್ಕೆ 7257000 ಸಾವಿರ ಹಣ ಮಂಜೂರಾತಿ ಅಗಿದ್ದು ರಸ್ತೆ ನಿರ್ವಹಣೆ ಯ ಬಗ್ಗೆ ಈಗಾಗಲೇ ಕ್ರಿಯಾಯೋಜನೆ ತಯಾರುಮಾಡಲಾಗುತ್ತಿದೆ ಎಂದರು.
ವೇದಿಕೆಯಲ್ಲಿ ತಾ.ಪಂ.ಅದ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅದ್ಯಕ್ಷೆ ಧನಲಕ್ಮೀ ಸಿ.ಬಂಗೇರ, ತಾ.ಪಂ.ಇಒ ರಾಜಣ್ಣ, ಅಧಿಕಾರಿ ನರೇಂದ್ರ ಬಾಬು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತುಂಗಪ್ಪ ಬಂಗೇರ, ಪದ್ಮಶೇಖರ್ ಜೈನ್, ಮಂಜುಳಾ ಮಾಧವ ಮಾವೆ, ಎಂ.ಎಸ್.ಮಹಮ್ಮದ್, ಮತ್ತು ತಾ.ಪಂ.ಸದಸ್ಯರುಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.