ಬಿ.ಸಿ ರೋಡಿನ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ದಿನಾಂಕ 27-11-2018ರಂದು ಗ್ರಾಮ ಮಟ್ಟದ ಅಧಿಕಾರಿಗಳು ಹಾಗೂ ಗ್ರಾ.ಪಂ ಅಧ್ಯಕ್ಷರುಗಳ ವಿಶೇಷ ಪ್ರಗತಿ ಪರಿಶೀಲನಾ ಸಭೆ ಕರೆಯಲಾಗಿತ್ತು.
ಸಭೆಯಲ್ಲಿ ಮಾತನಾಡಿದ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ನಾವು ಪ್ರಜಾಪ್ರಭುತ್ವದಡಿ ಕೆಲಸ ಮಾಡುತ್ತಿದ್ದೇವೆ ಎಂಬುದು ಗಮನದಲ್ಲಿರಲಿ, ಗ್ರಾ.ಪಂ ಅಧ್ಯಕ್ಷರಿಗೆ ಗೈಡ್ ಮಾಡಿ, ಓವರ್ ಟೇಕ್ ಮಾಡಲು ಹೋಗಬೇಡಿ ಎಂದು ಸಲಹೆ ನೀಡಿದ್ದಾರೆ.
ಅಧಿಕಾರಿಗಳು ಗ್ರಾ.ಪಂ ಜನಪ್ರತಿನಿಧಿಗಳೊಂದಿಗೆ ಸ್ಪಂದಿಸದಿದ್ದರೆ ಅಂಥ ಅಧಿಕಾರಿಗಳ ವಿರುದ್ಧ ಲಿಖಿತವಾಗಿ ಮೇಲಾಧಿಕಾರಿಗಳಿಗೆ ದೂರು ನೀಡಿ, ಅಧಿಕಾರಿಗಳು ಉದಾಸೀನ ಮನೋಭಾವನೆಯಿಂದ ಹೊರಬರಬೇಕು ಎಂದು ಶಾಸಕರು ಸ್ಪಷ್ಟಪಡಿಸಿದರು.
ಬಂಟ್ವಾಳ ತಾ.ಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ತಹಶೀಲ್ದಾರ್ ಪುರಂದರ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾ.ಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ, ವಂದಿಸಿದರು.
ಕೃಪೆ: bantwalnews