Rajesh Naik

ಪೊಳಲಿ ಸೇವಾಸಹಕಾರಿ ಸಂಘದ ವತಿಯಿಂದ ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ರೂ.1.5 ಲಕ್ಷ ಚೆಕ್ ಹಸ್ತಾಂತರ

ಬಂಟ್ವಾಳ : ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಂಟ್ವಾಳ ತಾಲೂಕಿನ ಪೊಳಲಿ ಸೇವಾಸಹಕಾರಿ ಸಂಘ 1.50 ಲಕ್ಷ ರೂ ಮೊತ್ತದ ಚೆಕ್ ನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮೂಲಕ ಸಿ.ಎಂ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಪೊಳಲಿ ಸಹಕಾರಿ ಸಂಘದ ಅಧ್ಯಕ್ಷ ರಾದ ಸಂತೋಷ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ವೆಂಕಟೇಶ್ ನಾವಡ, ಬಂಟ್ವಾಳ ವಲಯ ಮೇಲ್ವಿಚಾರಕ ಕೇಶವ ಕಿಣಿ, ಪೊಳಲಿ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ವಿಜಯಿರವಿ ಪೆರ್ನಾಂಡಿಸ್ ಹಾಗೂ ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಿ.ಆನಂದ ಉಪಸ್ಥಿತರಿದ್ದರು.

Polali-seva-sangh-cheque

Back To Top