Rajesh Naik

ಬಂಟ್ವಾಳ ಠಾಣೆ ಮೇಲ್ದರ್ಜೆಗೆ ಏರಿಸಲು ಗೃಹಸಚಿವರಿಗೆ ಮನವಿ

ಬಂಟ್ವಾಳ: ಬಂಟ್ವಾಳ‌ಕ್ಕೆ ಆಗಮಿಸಿದ ಗೃಹಸಚಿವ ಶ್ರೀ ಬಸವರಾಜ್ ಬೊಮ್ಮಾಯಿ ಅವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನಿರೀಕ್ಷಣಾ ಮಂದಿರದಲ್ಲಿ ಸ್ವಾಗತಿಸಿದರು. ತದನಂತರ ಸಚಿವರು ಪಶ್ಚಿಮವಲಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಸುದ್ದಿಗಾರರ ಜೊತೆ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲಾ‌ಎಸ್ಪಿ ಕಛೇರಿ ಸ್ಥಳಾಂತರದ ಬಗ್ಗೆ ಶೀಘ್ರದಲ್ಲೇ ‌ಬೆಂಗಳೂರಿನಲ್ಲಿ ಸಭೆ ನಡೆಸಿ ಸ್ಪಷ್ಟ ತೀರ್ಮಾನ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ಗೃಹಸಚಿವ ಶ್ರೀ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬಂಟ್ವಾಳ ಪೊಲೀಸ್ ಠಾಣೆಯನ್ನು ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಬಂಟ್ವಾಳ ನಗರ ಹಾಗೂ ಗ್ರಾಮಾಂತರಕ್ಕೆ ಪ್ರತ್ಯೇಕ ವೃತ್ತನಿರೀಕ್ಷಕರನ್ನು ನೇಮಿಸಲಾಗುವುದು ಎಂದರು.

ಕರ್ನಾಟಕದಲ್ಲೇ ಅತ್ಯಂತ ಹೆಚ್ಚು ಪೊಲೀಸ್ ಕ್ವಾಟ್ರಸ್ ಇದ್ದು, ಶೇ.60ರಷ್ಟು ಇರುವ ಕ್ವಾಟ್ರಸ್ ಗಳ ಸಂಖ್ಯೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಶೇ.80ಕ್ಕೆ ಏರಿಸುವ ಗುರಿ ಇರಿಸಲಾಗಿದೆ ಎಂದು ಹೇಳಿದ್ದಾರೆ.

welcome-bommai-1

welcome-bommai-2

welcome-bommai-3

welcome-bommai-4

Back To Top