ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆ 2019 ಇದರ ಬಗ್ಗೆ ಜನ ಜಾಗೃತಿ ಅಭಿಯಾನದ ಕಾರ್ಯಾಗಾರ ಬಿ.ಸಿ.ರೋಡಿನ ಬಿ.ಜೆ.ಪಿ ಕಛೇರಿಯಲ್ಲಿ ಜರುಗಿತು. ಕಾರ್ಯಗಾರದ ಉದ್ಗಾಟನೆಯನ್ನು ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ಮಾಡಿ ಪೌರತ್ವ ಕಾಯ್ದೆಯ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಾಲಾಡಿಸಿ ಈ ದೇಶದ ನಾಗರಿಕರಿಗೆ ವಾಸ್ತವ ಅಂಶಗಳನ್ನು ತಿಳಿಸಲು ಬಿಜೆಪಿ ಕಾರ್ಯಕರ್ತರು ಕಟಿಬದ್ಧರಾಗಬೇಕಾಗಿದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾಹಿತಿ ನೀಡುತ್ತಾ ಇದು ಯಾವುದೇ ಧರ್ಮದಾರಿಕ ಕಾನೂನು ಅಲ್ಲ ಇದರಿಂದ ಭಾರತದ ಯಾವುದೇ ಧರ್ಮದ ನಾಗರಿಕರಿಗೆ ತೊಂದರೆ ಆಗುವುದಿಲ್ಲ ಇದು ಯಾರಿಂದಲೂ ಪೌರತ್ವ ಕಿತ್ತುಕೊಳ್ಳುವ ಕಾನೂನು ಅಲ್ಲ ಇದು ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಕಾನೂನು ಆಗಿದೆ ಎಂದು ತಿಳಿಸಿದರು. ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ ಭಟ್ ರವರು ಜನ ಜಾಗೃತಿಯ ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕ್ಷೇತ್ರದ ಅಧ್ಯಕ್ಷರಾದ ಬಿ. ದೇವದಾಸದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು, ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ ಪ್ರಾಸ್ತವಿಕ ಮಾತನಾಡಿದರು. ಮತ್ತು ಪ್ರ.ಕಾರ್ಯದರ್ಶಿಯಾದ ಮೋನಪ್ಪ ದೇವಸ್ಯ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳ, ಕ್ಷೇತ್ರದ ಉಪಾಧ್ಯಕ್ಷರಾದ ವಿಜಯ ರೈ ಅಜ್ಜಿಬೆಟ್ಟು, ಕ್ಷೇತ್ರದ ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಗಣೇಶ್ ರೈ, ಜಿಲ್ಲಾ ಪಂಚಾಯತ್ ಸದಸ್ಯರಾದ ಕಮಲಾಕ್ಷಿ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯರಾದ ಪ್ರಭಾಕರ ಪ್ರಭು, ರಮೇಶ್ ಕುಡ್ಮೇರು, ಲಕ್ಷ್ಮೀ ಗೋಪಾಲಾಚಾರ್ಯ, ಹಾಗೂ ಪಂಚಾಯತ್ ಸಮಿತಿಯ ಸದಸ್ಯರು ಮತ್ತಿತರರು ಭಾಗವಹಿಸಿದ್ದರು.