ಕೇಂದ್ರ ಸರ್ಕಾರದ ಯೋಜನೆಗಳನ್ನು ಕಡೆಯ ಮೈಲಿಯವರೆಗೂ ತಲುಪಿಸುವ ಉದ್ದೇಶ ಹೊಂದಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಪ್ರತಿ ಗ್ರಾಮ ಪಂಚಾಯಿತಿಗೂ ಆಗಮಿಸುತ್ತಿದ್ದು ಕೇಂದ್ರ ಸರ್ಕಾರದ ಯೋಜನೆಗಳನ್ನು ಇನ್ನೂ ತಲುಪದೇ ಇರುವ ಫಲಾನುಭವಿಗಳಿಗೆ ತಲುಪಿಸಬೇಕಾಗಿದೆ ಎಂದು ಶಾಸಕರು ಹೇಳಿದರು.
ಕಳ್ಳಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಳ್ಳಿಗೆ ಪಂಚಾಯತ್ ಅಧ್ಯಕ್ಷರಾದ ಪುರುಷೋತ್ತಮ ಕೊಟ್ಟಾರಿ, ಉಪಾಧ್ಯಕ್ಷರಾದ ಶ್ರೀಮತಿ ವಾರಿಜ,ಪಂಚಾಯತ್ ಸದಸ್ಯರು, ಜನಪ್ರತಿನಿಧಿಗಳು ಎಸ್ ಬಿ ಐ, ಬಿಸಿ ರೋಡ್ ನ ಕ್ಷೇತ್ರ ಅಧಿಕಾರಿ ಲಾವಣ್ಯ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ, ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಬ್ಯಾಂಕಿನ ಮೂಲಕ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ನೀಡಲಾಯಿತು. ಫಲಾನುಭವಿಗಳು ತಮ್ಮ ಅನುಭವ ಹಂಚಿಕೊಂಡರು.