Rajesh Naik

ಸಜೀಪ ಮೂನ್ನೂರಿನಲ್ಲಿ ಸ್ವಯಂಪ್ರೇರಿತ ರಕ್ತದಾನ, ನೇತ್ರ ತಪಾಸಣಾ ಶಿಬಿರ

ಬಂಟ್ವಾಳ: ಬಿಜೆಪಿ ಸಜೀಪ ಮೂನ್ನೂರು ಗ್ರಾಮ ಸಮಿತಿ ಮತ್ತು ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಮತ್ತು ಲಯನ್ಸ್ ಮತ್ತು ಲಯನೆಸ್ಸ್ ಕ್ಲಬ್ ಬಂಟ್ವಾಳ ಸಹಯೋಗದೊಂದಿಗೆ ಸಜೀಪ ಮೂಡ ಕಂದೂರು ಶ್ರೀ ಗುರು ಮಾಚಿದೇವ ಸಮುದಾಯ ಭವನದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರವನ್ನು ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ದೀಪ ಬೆಳಗಿಸಿ ಉದ್ಘಾಟಿಸಿದರು.

sajipa2

sajipa1

ಬಳಿಕ ಮಾತನಾಡಿದ ಅವರು ಸಮಾಜಮುಖಿ ಚಿಂತನೆಗಳೊಂದಿಗೆ ಬೇರೆಯವರ ಕಷ್ಟ ಸುಖಗಳಿಗೆ ಸ್ಪಂದಿಸುವ ಗುಣ ಗ್ರಾಮ ಗ್ರಾಮಗಳಲ್ಲಿ ಯುವಕರಲ್ಲಿ ಮೂಡಿದಾಗ ಆರೋಗ್ಯವಂತ ಗ್ರಾಮದ ನಿರ್ಮಾಣ ಸಾಧ್ಯ ಎಂದು ಹೇಳಿದರು. ಅರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ, ಇಂತಹ ಕಾರ್ಯಕ್ರಮಗಳನ್ನು ಸಂಘಟನೆಗಳು ಮಾಡುವುದರಿಂದ ಸಮಾಜದ ಏಳಿಗೆ ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಯಾನಂದ ಬಿಎಮ್ ವಹಿಸಿದ್ದರು.

ವೇದಿಕೆಯಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ಉದ್ಯಮಿ ಗೋಪಾಲಕೃಷ್ಣ ಆಚಾರ್ಯ, ಲಯನ್ಸ್ ಕ್ಲಬ್ ಅಧ್ಯಕ್ಷ ಲಕ್ಷಣ್ ಅಗ್ರಬೈಲು, ಲಯನೆಸ್ ಕ್ಲಬ್ ಅಧ್ಯಕ್ಷೆ ದೇವಿಕಾ ದಾಮೋದರ, ಡಾ| ಬಾಲಕೃಷ್ಣ ಉಪಸ್ಥಿತರಿದ್ದರು. ಲಯನ್ಸ್ ಜಿಲ್ಲಾ ಸಂಯೋಜಕ ದಾಮೋದರ್ ಬಿಎಮ್ ಸ್ವಾಗತಿಸಿ ಶ್ರೀ ಗುರು ಮಾಚಿದೇವ ಸಮುದಾಯ ಭವನದ ಅಧ್ಯಕ್ಷ ಎನ್.ಕೆ ಶಿವ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸದರು. 67 ಜನ ರಕ್ತ ದಾನ ಮಾಡಿದರು.

Back To Top
Highslide for Wordpress Plugin