ಬಂಟ್ವಾಳ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯಗಳು ಸಾರ್ವಜನಿಕರಿಗೆ ದೊರಕುವುದಕ್ಕಾಗಿ ಅಗತ್ಯವಾದ ವೈದ್ಯಕೀಯ ಉಪಕರಣಗಳನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿಯವರ ಮನವಿಯ ಮೇರೆಗೆ ಮಂಗಳೂರು ಎ.ಜೆ. ಆಸ್ಪತ್ರೆಯ ವತಿಯಿಂದ ನೀಡಲ್ಪಟ್ಟ ಸುಮಾರು ಐವತ್ತು ಲಕ್ಷ ರೂ. ಉಪಕರಣಗಳನ್ನು ಆಸ್ಪತ್ರೆಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರೊಂದಿಗೆ ದಾನಿಗಳಾದ ಎ.ಜೆ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ಉಪಸ್ಥಿತರಿದ್ದರು.
ಇನ್ನು ಐದಾರು ತಿಂಗಳೊಳಗೆ ಆಸ್ಪತ್ರೆಗೆ ಎಸ್.ಟಿ.ಪಿಯನ್ನು ಒದಗಿಸಲಾಗುತ್ತದೆ. ಇದರಿಂ ತ್ಯಾಜ್ಯ ವಿಲೇವಾರಿ ವೈಜ್ಞಾನಿಕವಾಗಿ ನಡೆಯಲಿದೆ. ಆಸ್ಪತ್ರೆಗೆ ಅಗತ್ಯವಾಗಿ ಬೇಕಾಗಿರುವ ಮಕ್ಕಳ ತಜ್ಞರು ಮತ್ತು ಅರವಳಿಕೆ ತಜ್ಞರ ಕೊರತೆಯನ್ನು ನೀಗಿಸಲು ಆರೋಗ್ಯ ಸಚಿವರೊಂದಿಗೆ ಮಾತನಾಡುವುದಾಗಿ ಶಾಸಕ ರಾಜೇಶ್ ನಾೖಕ್ ಈ ಸಂದರ್ಭದಲ್ಲಿ ಹೇಳಿದರು. ಆಸ್ಪತ್ರೆಯಲ್ಲಿ ಡಯಾಲಿಸಿಸ್‌ಗೂ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
ಕೃಪೆ: bantwalnews