ರಾಷ್ಟ್ರ ಜಾಗರಣ ಸಮಿತಿ ನೇತೃತ್ವದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ 2019 ಸಮರ್ಥನಾ ಸಮಲೋಚನಾ ಸಭೆಯು ದಿನಾಂಕ 10-01-2020 ರಂದು ಸ್ಪರ್ಶ ಕಲಾ ಮಂದಿರದಲ್ಲಿ ಜರಗಿತು. ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಮಾತನಾಡಿ ಪೌರತ್ವ ತಿದ್ದುಪಡಿ ಕಾಯಿದೆ ದೇಶದ ಅಭಿವೃದ್ಧಿ ಮತ್ತು ಸಮಗ್ರತೆಗೆ ಪೂರಕವಾದ ಕಾಯ್ದೆಯಾಗಿರುವುದರಿಂದ ಜನತೆ ಬೆಂಬಲ ನೀಡಬೇಕೆಂದು ಕರೆ ನೀಡಿದರು.
ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮಾತನಾಡಿ ದಿನಾಂಕ 27-01-2020 ರಂದು ಮಂಗಳೂರು ಕುಳೂರುನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಸಮರ್ಥನಾ ಸಭೆಗೆ ಬಂಟ್ವಾಳ ಕ್ಷೇತ್ರದಿಂದ ಸುಮಾರು 25,000 ಜನರು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ರಾಷ್ಟೀಯ ಸ್ವಯಂ ಸೇವಕ ಸಂಘದ ವಿಭಾಗ ಸಂಪರ್ಕ ಪ್ರಮುಖ್ ರವೀಂದ್ರರವರು, ಅಭಿಯಾನ ಪ್ರಮುಖ್ ಸುಧೀರ್ ಶೆಟ್ಟಿ ಕಣ್ಣೂರು ಇವರು ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಮಾಜಿ ಶಾಸಕರುಗಳಾದ ರುಕ್ಮಯ ಪೂಜಾರಿ,ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಸುಲೋಚನಾ ಜಿ.ಕೆ ಭಟ್, ಹರಿಕೃಷ್ಣ ಬಂಟ್ವಾಳ,ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು. ರಾಮದಾಸ್ ಬಂಟ್ವಾಳ ಸ್ವಾಗತಿಸಿ, ದೇವಪ್ಪ ಪೂಜಾರಿ ವಂದಿಸಿದರು.ಮೋನಪ್ಪ ದೇವಸ್ಯ ಕಾರ್ಯಕ್ರಮವನ್ನು ನಿರೂಪಿಸಿದರು.