ಬಂಟ್ವಾಳ: ಭಾರತ ಗೆಲ್ಲಬೇಕೆಂಬ ಧೃಡ ನಿರ್ಧಾರದ ಜೊತೆಗೆ ಕಾಂಗ್ರೇಸ್ ಮುಕ್ತ ದೇಶ ನಿರ್ಮಾಣಕ್ಕಾಗಿ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿಯಾಗಬೇಕಿದೆ ಎಂದು ವಿಧಾನಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟಿದ್ದಾರೆ.
ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸಾರಥ್ಯದಲ್ಲಿ ನಡೆಯುತ್ತಿರುವ ’ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಪಾದಯಾತ್ರೆಯ 8 ನೇ ದಿನವಾದ ಮಂಗಳವಾರ ಸಂಜೆ ಇರ್ವತ್ತೂರು ಗ್ರಾಮದ ಎಡ್ತೂರು ಪದವು ಮೈದಾನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ವಾಜಪೇಯಿ ಪ್ರಧಾನಮಂತ್ರಿಯಾಗಿದ್ದ ಕಾಲದಲ್ಲಿ ದೇಶ ಕಂಡಿದ್ದ ಅಭಿವೃದ್ದಿ ಮತ್ತೆ ಮುಂದುವರಿಯಬೇಕಾಗಿದೆ ಎಂದ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಕರೆ ನೀಡಿದರು.ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಯಾವುದೇ ಜಾತಿ-ಮತವನ್ನು ಕೇಂದ್ರೀಕರಿಸಿ ಯೋಜನೆಗಳನ್ನು ರೂಪಿಸಿಲ್ಲ, ಆದರೆ ಈಗಿನ ಕೇಂದ್ರ ಹಾಗೂ ರಾಜ್ಯದ ಕಾಂಗ್ರೇಸ್ ನೇತೃತ್ವದ ಸರ್ಕಾರ ತಮ್ಮದು ಜನರ ಸರ್ಕಾರವಲ್ಲ, ಒಂದೇ ಸಮುದಾಯದ ಸರ್ಕಾರ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಜಿ.ಆನಂದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಚಾಲಕ , ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದೇವದಾಸ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ವೇದಿಕೆಯಲ್ಲಿ ಉಪಸ್ಥಿತರಿದ್ದ “ಗ್ರಾಮದೆಡೆಗೆ -ಬಿಜೆಪಿ ನಡಿಗೆ ” ಪಾದಯಾತ್ರೆಯ ನೇತಾರ ಉಳಿಪಾಡಿ ಗುತ್ತು ರಾಜೇಶ್ ನಾಯ್ಕ್ ಮಾತನಾಡಿ, ಪ್ರತೀಗ್ರಾಮಗಳಲ್ಲೂ ಪಕ್ಷ ಸಂಘಟನೆಯ ಕಾರ್ಯದಲ್ಲಿ ಕಾರ್ಯಕರ್ತರು ಉತ್ಸಾಹದಿಂದ ತೊಡಗಿಸಿಕೊಳ್ಳುತ್ತಿದ್ದಾರೆ, ಎಲ್ಲರೂ ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿಸುವ ಸಂಕಲ್ಪ ತೊಟ್ಟಿದ್ದಾರೆ ಎಂದರು.ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಉಪಾಧ್ಯಕ್ಷ ಪುರುಷ ಎನ್ ಸಾಲ್ಯಾನ್ ನೆತ್ರಕೆರೆ ಮಾತನಾಡಿದರು.
ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಸುಲೋಚನಾ ಜಿಕೆ ಭಟ್ ಪಕ್ಷದ ಪ್ರಮುಖರಾದ ದಿನೇಶ್ ಭಂಡಾರಿ, ರಾಮದಾಸ್ ಬಂಟ್ವಾಳ, ಪೃಥ್ವಿರಾಜ್, ಸಂದೇಶ್ ಶೆಟ್ಟಿ, ರಾಜೇಶ್ ಶೆಟ್ಟಿ ಪಜೀರು, ಶಂಕರ್ ಶೆಟ್ಟಿ, ಸೀತರಾಮ ಶೆಟ್ಟಿ ಸೇವ, ಬೂಬ ಸಫಲ್ಯ, ಭಾರತಿ ಶೆಟ್ಟಿ, ರೊನಾಲ್ಡ್ ಡಿಸೋಜ ಅಮ್ಟಾಡಿ , ಅಬ್ದುಲ್ ರಝಾಕ್, ಆನಂದ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಪ್ರತಿಭಾನ್ವಿತೆ ಕು.ಗೀತಾ ಎಸ್.ಶೆಟ್ಟಿ ಯವರನ್ನು ಸನ್ಮಾನಿಸಲಾಯಿತು.
ಜಿ.ಪಂ.ಮಾಜಿ ಸದಸ್ಯ ತುಂಗಪ್ಪ ಬಂಗೇರ ಸ್ವಾಗತಿಸಿದರು. ದಿನೇಶ್ ಅಮ್ಟೂರು ವಂದಿಸಿದರು. ಭರತ್ ಕುಮಾರ್ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ಸಭಾಕಾರ್ಯಕ್ರಮದ ಆರಂಭದಲ್ಲಿ ಧರ್ಮಸ್ಥಳದ ಗಣೇಶ್ ಆರ್ಕೆಸ್ಟಾ ತಂಡದಿಂದ ದೇಶಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.