ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕುಡಿಯುವ ನೀರಿನ ಪೈಪ್ ಗಳಿಗೆ ಹಾನಿಯಾಗಿದ್ದು, ಸುಮಾರು ಐದು ಗ್ರಾಮಗಳಿಗೆ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉದ್ಬವವಾದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲುರವರ ನೇತೃತ್ವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಕುಡಿಯುವ ನೀರಿನ ಸಮಸ್ಯೆ ಜೊತೆ ಭೂ ಒತ್ತುವರಿ, ಗುಡ್ಡ ಅಗೆತ, ಮೆಸ್ಕಾಂ ಸಮಸ್ಯೆಗಳು ಬರದಂತೆ ಎಚ್ಚರಿಕೆ ವಹಿಸಬೇಕು, ಜೊತೆಗೆ ಪ್ರತಿ 15 ದಿನಗಳಿಗೊಮ್ಮೆ ಗ್ರಾ. ಪಂ. ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಗ್ರಾಮ ಮಟ್ಟದ ಅಧಿಕಾರಿಗಳ ಹಾಗೂ ಗುತ್ತಿಗೆ ವಹಿಸಿಕೊಂಡ ಕಂಪೆನಿಯ ಸಿಬ್ಬಂದಿಗಳು ಸಭೆ ನಡೆಸಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಯಿತು.