ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಸಿದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಸಿದರು.
ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಜನ ಸ್ವರಾಜ್ ಸಮಾವೇಶದಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಭಾಗಿಯಾದರು. ಸಮಾವೇಶದಲ್ಲಿ ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ. ವಿ. ಸದಾನಂದಗೌಡ, ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಶ್ರೀ ಎಸ್. ಟಿ. ಸೋಮಶೇಖರ್, ಶ್ರೀ ಎಸ್. ಅಂಗಾರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅಶ್ವತ್ಥ್ ನಾರಾಯಣ, ರಾಜ್ಯ ಉಪಾಧ್ಯಕ್ಷರಾದ ಶ್ರೀ […]
ರೂ. 13.90 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳನ್ನು ಸಂಪರ್ಕಿಸುವ ಮೂಲರಪಟ್ನ ನೂತನ ಸೇತುವೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಂಡಿದೆ.
ವಿಧಾನ ಪರಿಷತ್ ಚುನಾವಣೆಯ ಪೂರ್ವಸಿದ್ದತಾ ಸಭೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ ಬಂಟ್ವಾಳ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಕಚೇರಿ ಬಿ. ಸಿ. ರೋಡ್ ನಲ್ಲಿ ಜರಗಿತು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಕ್ಷೇತ್ರದ ಪ್ರಭಾರಿಗಳಾದ ಕೊರಗಪ್ಪ ನಾಯ್ಕ್ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ ಡೋಂಬಯ್ಯ ಅರಳ ಬೂಡದ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಬಿ. ಸಿ. ರೋಡ್ ಮಿನಿವಿಧಾನಸೌದದಲ್ಲಿ ರಾಷ್ಟ್ರದ್ವಜಾರೋಹಣ ಮತ್ತು ಸಭಾ ಕಾರ್ಯಕ್ರಮ ನಡೆಯಿತು.
ಬಂಟ್ವಾಳ ಮಿನಿವಿಧಾನಸೌಧದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸಾರ್ವಜನಿಕರಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕೇಂದ್ರ ಸರಕಾರದ “ಸಾಲ ಸಂಪರ್ಕ” ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರದ ಪೂರ್ವಭಾವಿ ಸಭೆ ಬಂಟ್ವಾಳ ವ್ಯಾಪ್ತಿಯ ವಿವಿಧ ಬ್ಯಾಂಕ್ ಗಳ ಪ್ರಬಂಧಕರುಗಳು, ಅಧಿಕಾರಿಗಳು ಹಾಗೂ ಪ್ರಮುಖರ ಜೊತೆ ಸಭೆ ಬಂಟ್ವಾಳದ ಬಂಟರ ಭವನದ ಹಾಲ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಮತ್ತು ಪಕ್ಷದ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕು ಆರೋಗ್ಯ ಕೇಂದ್ರದಲ್ಲಿ ನೂತನ 108 ಎಡ್ವಾನ್ಸ್ ಲೈಫ್ ಸಫೋರ್ಟ್ ಅಂಬ್ಯುಲೆನ್ಸ್ ವಾಹನವನ್ನು ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಲೋಕಾರ್ಪಣೆ ಮಾಡಿದರು. ವೆಂಟಿಲೇಟರ್, ಕಾರ್ಡಿಕ್ ಮಾನಿಟರ್ , ಇಸಿಜಿ, ಆಕ್ಸಿಜನ್ ಸೌಲಭ್ಯಗಳನ್ನು ಹೊಂದಿರುವ ತಾಲೂಕಿನಲ್ಲೇ ಪ್ರಥಮ ಅಂಬುಲೆನ್ಸ್ ಇದಾಗಿದ್ದು ತುರ್ತು ಸಂಧರ್ಭದಲ್ಲಿ ಸಾರ್ವಜನಿಕರಿಗೆ ಇದರಿಂದ ಹೆಚ್ಚಿನ ಪ್ರಯೋಜನ ಲಭಿಸಲಿದೆ.
ಬಿಜೆಪಿ ಬಂಟ್ವಾಳ ಮಂಡಲ ವತಿಯಿಂದ ನಡೆದ ಪಂಚಾಯತ್ ಸದಸ್ಯರ ಅಭ್ಯಾಸವರ್ಗದಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಪಾಲ್ಗೊಂಡು ಸಭೆಯನ್ನುದ್ದೇಶಿಸಿ ಮಾತನಾಡಿದರು.
ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸಂಸದ ಹಾಗೂ ಉಸ್ತುವಾರಿ ಸಚಿವರ ಜೊತೆ ನಿಯೋಗಯೊಂದಿಗೆ ಭೇಟಿ ಮಾಡಿ ತಾಲೂಕಿನಲ್ಲಿ ಪಾಕೃತಿಕ ವಿಕೋಪದಲ್ಲಿ ಉಂಟಾದ ಮನೆ ಹಾಗೂ ಕೃಷಿ ಹಾನಿಯ ಬಗ್ಗೆ ಅವರ ಗಮನಕ್ಕೆ ತಂದು ವಿಶೇಷ ಪರಿಹಾರ ನೀಡುವಂತೆ ಒತ್ತಾಯ ಮಾಡುವುದಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಆ.2 ರಂದು ಶನಿವಾರ ಸಂಜೆ ವೇಳೆ ಸುರಿದ ಸಿಡಿಲು ಸಹಿತ ಸುಂಟರಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ನಾಲ್ಕು ಗ್ರಾಮಗಳಾದ ಕಾವಳಮೂಡೂರು, ಬಡಗಕಜೆಕಾರು, ಉಳಿ, ತೆಂಕಕಜೆಕಾರು ಗ್ರಾಮಗಳಲ್ಲಿ ರೈತರ […]