ಬಂಟ್ವಾಳ: ನಬಾರ್ಡ್ ಯೋಜನೆಯಡಿ 94 ಲಕ್ಷ ಅನುದಾನದಲ್ಲಿ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡದ ಶಿಲಾನ್ಯಾಸವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಊರಿನ ಜನರ ಸಹಕಾರದ ಜೊತೆ ಕಾಲೇಜಿನ ಬೇಡಿಕೆಗೆ ಅನುಗುಣವಾಗಿ ಕೆಲಸ ಕಾರ್ಯಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು. ಸರಕಾರದ ಅನುದಾನದ ಜೊತೆಯಲ್ಲಿ ದಾನಿಗಳ ಸಹಕಾರ ಇದ್ದರೆ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು. ಯಾವುದೇ ಸರಕಾರಿ ಸಂಸ್ಥೆ ಗಳು ಅಭಿವೃದ್ಧಿ ಗೆ ಎಲ್ಲರ […]
Read More
ಬಂಟ್ವಾಳ: ಬಂಟ್ವಾಳಕ್ಕೆ ಆಗಮಿಸಿದ ಗೃಹಸಚಿವ ಶ್ರೀ ಬಸವರಾಜ್ ಬೊಮ್ಮಾಯಿ ಅವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನಿರೀಕ್ಷಣಾ ಮಂದಿರದಲ್ಲಿ ಸ್ವಾಗತಿಸಿದರು. ತದನಂತರ ಸಚಿವರು ಪಶ್ಚಿಮವಲಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಸುದ್ದಿಗಾರರ ಜೊತೆ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾಎಸ್ಪಿ ಕಛೇರಿ ಸ್ಥಳಾಂತರದ ಬಗ್ಗೆ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ನಡೆಸಿ ಸ್ಪಷ್ಟ ತೀರ್ಮಾನ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ಗೃಹಸಚಿವ ಶ್ರೀ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬಂಟ್ವಾಳ ಪೊಲೀಸ್ ಠಾಣೆಯನ್ನು ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಬಂಟ್ವಾಳ ನಗರ ಹಾಗೂ ಗ್ರಾಮಾಂತರಕ್ಕೆ […]
Read More
ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ನಲ್ಲಿ ನಗರ ಸುಂದರೀಕರಣ ಯೋಜನೆಗೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಕಂದಾಯ ಮತ್ತು ಪೌರಾಡಳಿತ ಸಚಿವ ಶ್ರೀ ಆರ್. ಅಶೋಕ್, ಶಾಸಕ ಶ್ರೀ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀ ಸಂಜೀವ ಮಠಂದೂರು, ಶಾಸಕ ಶ್ರೀ ವೇದವ್ಯಾಸ್ ಕಾಮತ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಹಾಗೂ ಇನ್ನಿತರ […]
Read More
ಮೂಡುಬಿದಿರೆ: ಕ್ರೀಡೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬನ ಆದ್ಯ ಕರ್ತವ್ಯವಾಗಿದ್ದು, ಮನುಷ್ಯನ ಜೀವನದ ಸರ್ವಾಂಗೀಣ ಬೆಳೆವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ಆಯೋಜಿಸಿದ ಆರನೇ ವರ್ಷದ ವರಿಷ್ಠಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಆಳ್ವಾಸ್ ಪ್ರತಿಷ್ಠಾನ ಕೀಡೆ ಮತ್ತು ಸಂಸ್ಕøತಿಯನ್ನು ಉಳಿಸಿ, ಬೆಳೆಸಿದ ಸಂಸ್ಥೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ಅಧ್ಯಕ್ಷತೆವಹಿಸಿದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. […]
Read More
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮಹಾತ್ವಾಕಾಂಕ್ಷೆಯ ಬಿ.ಸಿ ರೋಡ್ ನಗರದ ಸುಂದರೀಕರಣ ಯೋಜನೆಗೆ ಶಿಲಾನ್ಯಾಸ ಅಕ್ಟೋಬರ್ 21 ಸೋಮವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು ಕಂದಾಯ ಸಚಿವರಾದ ಆರ್.ಅಶೋಕ್, ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷರು ಸಂಸದ ನಳಿನ್ ಕುಮಾರ್ ಕಟೀಲುರವರು ಮತ್ತು ಗಣ್ಯರು ಭಾಗವಹಿಸಲಿದ್ದು ಕಾರ್ಯಕ್ರಮದ ಪೂರ್ವ ತಯಾರಿಯ ಬಗ್ಗೆ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು. ಈ ಸಂಧರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, […]
Read More
ರಾಯಿ ಶ್ರೀ ಶಾರದಾ ಪೂಜಾ ಮಹೋತ್ಸವಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಈ ಸಂಧರ್ಭದಲ್ಲಿ ರಮನಾಥ ರಾಯಿ, ದುರ್ಗಾದಾಸ್ ಶೆಟ್ಟಿ, ವಸಂತ ಅಣ್ಣಳಿಕೆ, ಸಂತೋಷ್ ರಾಯಿ, ಡೊಂಬಯ್ಯ ಅರಳ, ಉಮೇಶ್ ಅರಳ, ಪ್ರಭಾಕರ ಪ್ರಭು, ಸುದರ್ಶನ್ ಬಜ, ದೇವಪ್ಪ ಪೂಜಾರಿ, ರಂಜಿತ್ ಮೈರ, ನಂದರಾಮ ರೈ, ಪುರುಷೋತ್ತಮ ಶೆಟ್ಟಿ ಉಪಸ್ಥಿತರಿದ್ದರು. ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುತ್ತಿರುವ ಬಂಟ್ವಾಳ ದಸರಾ ಮಹೋತ್ಸವಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಈ […]
Read More
ಬಂಟ್ವಾಳ : ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಂಟ್ವಾಳ ತಾಲೂಕಿನ ಪೊಳಲಿ ಸೇವಾಸಹಕಾರಿ ಸಂಘ 1.50 ಲಕ್ಷ ರೂ ಮೊತ್ತದ ಚೆಕ್ ನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮೂಲಕ ಸಿ.ಎಂ ಅವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಪೊಳಲಿ ಸಹಕಾರಿ ಸಂಘದ ಅಧ್ಯಕ್ಷ ರಾದ ಸಂತೋಷ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ವೆಂಕಟೇಶ್ ನಾವಡ, ಬಂಟ್ವಾಳ ವಲಯ ಮೇಲ್ವಿಚಾರಕ ಕೇಶವ ಕಿಣಿ, ಪೊಳಲಿ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ವಿಜಯಿರವಿ ಪೆರ್ನಾಂಡಿಸ್ ಹಾಗೂ ಬಂಟ್ವಾಳ ವ್ಯವಸಾಯ ಸೇವಾ […]
Read More
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಮರ್ಪಣೆಗೊಳ್ಳಲಿರುವ ನೂತನ ಬ್ರಹ್ಮರಥಕ್ಕೆ ಬಂಟ್ವಾಳ ತುಳುಕೂಟ, ಶ್ರೀರಕ್ತೇಶ್ವರಿ ದೇವಿ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಬಿ.ಸಿ. ರೋಡ್ ಜಂಕ್ಷನ್‌ನಲ್ಲಿ ಅದ್ದೂರಿಯಾಗಿ ಸ್ವಾಗತಿಸಿ ಬೀಳ್ಕೊಡಲಾಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ದೀಪ ಬೆಳಗಿಸಿ ರಥದ ಸ್ವಾಗತಕ್ಕೆ ಚಾಲನೆ ನೀಡಿದರು. ಇದೇ ವೇಳೆ ರಥಕ್ಕೆ ಬೃಹದಾಕಾರ ಹೂವಿನ ಮಾಲೆಯನ್ನು ಸಮರ್ಪಿಸಲಾಯಿತು. ಶ್ರೀರಕ್ತೇಶ್ವರಿ ದೇವಿ ದೇವಸ್ಥಾನ ಆಡಳಿತ ಮಂಡಳಿಯಿಂದ ರಥ ಆರತಿ ಬೆಳಗಲಾಯಿತು.
Read More
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬಂಟ್ವಾಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಿಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ) ಬಂಟ್ವಾಳ ವತಿಯಿಂದ 150ನೇ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ವ್ಯಸನಮುಕ್ತರ ಸಮಾವೇಶ ಬಂಟ್ವಾಳದಲ್ಲಿ ನಡೆಯಿತು. ಆರಂಭದಲ್ಲಿ ಬಿ.ಸಿ. ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದ ಮುಂಭಾಗದಿಂದ ಹೊರಟ ಜಾಥಾವನ್ನು ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಎ.ಸಿ. ಭಂಡಾರಿ ಉದ್ಘಾಟಿಸಿದರು. ಬಳಿಕ ನಡೆದ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಜ್ಯೋತಿ ಬೆಳಗಿಸಿ […]
Read More
ಪ್ರವಾಸೋದ್ಯಮ ಸಚಿವರಾದ ಸಿ.ಟಿ ರವಿಯವರು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರನ್ನು ಬಿ.ಸಿ ರೋಡಿನ ಶಾಸಕರ ಕಚೇರಿಯಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರದ ಪ್ರವಾಸೋದ್ಯಮದ ಬಗ್ಗೆ ಸಚಿವರಲ್ಲಿ ಶಾಸಕರು ಚರ್ಚಿಸಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಕ್ಷೇತ್ರ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಪುರಸಭಾ ಸದಸ್ಯ ಗೋವಿಂದ ಪ್ರಭು, ಯಶವಂತ ದೆರಾಜೆ, ರಮನಾಥ ರಾಯಿ, ಗಣೇಶ್ ರೈ ಮಾಣಿ, ಪ್ರಭಾಕರ ಪ್ರಭು, ಪುರುಷೋತ್ತಮ ಶೆಟ್ಟಿ, ಯಶೋಧರ ಕರ್ಬೆಟ್ಟು, ರೋನಾಲ್ಟ್ ಡಿಸೋಜ, ಪ್ರದೀಪ್ […]
Read More