ಕೇಶವ ಸ್ಮೃತಿ ಸಂವರ್ಧನ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ನವಂಬರ್ 19 ಮತ್ತು 20 ರಂದು ಸಂಘನಿಕೇತನದಲ್ಲಿ ನಡೆಯಲಿರುವ ಕನ್ನಡ ಶಾಲಾ ಮಕ್ಕಳ ಹಬ್ಬ ಕಾರ್ಯಕ್ರಮದ ಪೂರ್ವಭಾವಿಯಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಲಾ SDMC ಪದಾಧಿಕಾರಿಗಳೊಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಿ. ಸಿ. ರೋಡ್ ಸ್ಪರ್ಶಕಲಾಮಂದಿರದಲ್ಲಿ ಸಭೆ ನಡೆಸಿದರು.
Read More
ರೂ. 18.50 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಳ್ಳುತ್ತಿರುವ ಸುರೋಳಿಗುಡ್ಡೆ ಶ್ರೀ ಮಲರಾಯ ದೈವಸ್ಥಾನ ಮತ್ತು ರೆಂಗೆಲು ಶ್ರೀ ಪಂಜುರ್ಲಿ ದೈವಸ್ಥಾನ ಸಂಪರ್ಕಿಸುವ ರಸ್ತೆ ಕಾಮಗಾರಿ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು.
Read More
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಪಿಡಿಒಗಳ ಸಭೆ ನಡೆಸಿದರು. ಬಂಟ್ವಾಳ ಕ್ಷೇತ್ರದ 39 ಗ್ರಾಮ ಪಂಚಾಯತ್‌ಗಳನ್ನೊಳಗೊಂಡು 6 ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮಕ್ಕೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, 25ಕ್ಕೂ ಅಧಿಕ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಸಭೆಯಲ್ಲಿ ಗ್ರಾಮಸ್ಥರನ್ನು ಸೇರಿಸಿ ಅವರ ಸಮಸ್ಯೆ, ದೂರುಗಳಿಗೆ ಸ್ಪಂದನೆ ನೀಡಲು ಸಹಕಾರ ನೀಡುವ ಜತೆಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಸಿದ್ಧರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
Read More
ಸಮಾಜ ಸೇವಕ ಶ್ರೀ ವಸಂತ ಪೂಜಾರಿ ಮುದಿಮರ ಇವರು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
Read More
ನಾವೂರು ಗ್ರಾಮ ಪಂಚಾಯತ್‌ನ ದೇವಸ್ಯಪಡೂರಿನಲ್ಲಿ ನಡೆದ ಉಪಚುನಾವಣೆಯಲ್ಲಿ 20 ವರ್ಷದ ಬಳಿಕ ಬಿಜೆಪಿ ಅಭ್ಯರ್ಥಿ ಗೆಲುವಿನ ಹಿನ್ನೆಲೆಯಲ್ಲಿ ಮತದಾರರಿಗೆ ಮತ್ತು ಬಿಜೆಪಿ ಕಾರ್ಯಕರ್ತರಿಗೆ ನಡೆದ ಅಭಿನಂದನಾ ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.
Read More
ಮಾಣಿ ಕೊಡಾಜೆಯಲ್ಲಿ ನೂತನ ರಿಕ್ಷಾ ನಿಲ್ದಾಣಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ,ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಸುಲೋಚನ ಜಿಕೆ ಭಟ್, ಅನಂತಾಡಿ ಗ್ರಾ.ಪಂ ಅಧ್ಯಕ್ಷರಾದ ಗಣೇಶ್, ನೆಟ್ಲಮುಡ್ನೂರು ಗ್ರಾ.ಪಂ ಅಧ್ಯಕ್ಷರಾದ ಸತೀಶ್,ವೀರಕಂಭ ಗ್ರಾ.ಪಂ ಅಧ್ಯಕ್ಷ ದಿನೇಶ್, ಬಿಜೆಪಿ ಪ್ರಮುಖರಾದ ಡೊಂಬಯ ಅರಳ ಸನತ್ ಕುಮಾರ್ ರೈ, ಅಶೋಕ್ ರೈ, ತನಿಯಪ್ಪ ಗೌಡ, ಪುಷ್ಪರಾಜ್ ಚೌಟ, ಗಣೇಶ್ ರೈ ಮಾಣಿ, ಸ್ಥಳೀಯರು ಉಪಸ್ಥಿತರಿದ್ದರು.
Read More
ಮೂಡಬಿದಿರೆಯ ತಾಲೂಕು ಮಿಜಾರು ಅಲೇರಿ ಶ್ರೀ ಸತ್ಯ ಸಾರಾಮಾನಿ ಕಾನದ ಕಟದ ಮೂಲಕ್ಷೇತ್ರದ ಅಭಿವೃದ್ಧಿಗಾಗಿ ನೆರವಾಗುವ ನಿಟ್ಟಿನಲ್ಲಿ ರೂ. 5 ಲಕ್ಷ ಚೆಕ್ ಅನ್ನು ಕಚೇರಿಯಲ್ಲಿ ಜೀರ್ಣೋದ್ಧಾರ ಸಮಿತಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಶಿವರಾಜ್ ಪಿ. ಬಿ. ಬಂಟ್ವಾಳ ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್, ಬಂಟ್ವಾಳ ಬಿಜೆಪಿ ಎಸ್. ಸಿ. ಮೋರ್ಚಾದ ಅಧ್ಯಕ್ಷ ಕೇಶವ ದೈಪಲ, ಎಸ್. ಸಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ […]
Read More
ರೂ. 135 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಬಂಟ್ವಾಳ ಜಕ್ರಿಬೆಟ್ಟುವಿನಿಂದ ನರಿಕೊಂಬು ಸಂಪರ್ಕದ ಸೇತುವೆ ಮತ್ತು ಅಣೆಕಟ್ಟು ನಿರ್ಮಾಣದ ಪ್ರದೇಶಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಈ ಸೇತುವೆ ಮತ್ತು ಅಣೆಕಟ್ಟು ನಿರ್ಮಾಣ ದಿಂದ ಎರಡು ಭಾಗದ ಜನರಿಗೆ ಪ್ರಯೋಜನವಾಗಲಿದ್ದು, ಕೃಷಿ ಮತ್ತು ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ.
Read More
ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಶ್ರೀಯುತ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಇವರಿಗೆ ಊರ ನಾಗರಿಕರ ಪರವಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಗೌರವಿಸಿದರು.
Read More
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ರಾಷ್ಟ್ರಧ್ವಜಾರೋಹಣ ನಡೆಯಿತು.
Read More