ಸರಕಾರಿ ತಾಲೂಕು ಆಸ್ಪತ್ರೆ ಬಂಟ್ವಾಳ ರೂ. 1.67 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ 24 ಹಾಸಿಗೆಗಳ ತೀವ್ರನಿಗಾ ಘಟಕ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ ಸಂಸದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲುರವರ ಉಪಸ್ಥಿತಿಯಲ್ಲಿ ಲೋಕಾರ್ಪಣೆ ಮಾಡಲಾಯಿತು.
ಸರಕಾರಿ ತಾಲೂಕು ಆಸ್ಪತ್ರೆ ಬಂಟ್ವಾಳ ರೂ. 1.67 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ 24 ಹಾಸಿಗೆಗಳ ತೀವ್ರನಿಗಾ ಘಟಕ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ ಸಂಸದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲುರವರ ಉಪಸ್ಥಿತಿಯಲ್ಲಿ ಲೋಕಾರ್ಪಣೆ ಮಾಡಲಾಯಿತು.
ಬಿ. ಸಿ. ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಮೋದಿ ಆಡಳಿತದ ಬಿಜೆಪಿ ಸರಕಾರದ 8ರ ಸಂಭ್ರಮಾಚರಣೆಯ ಭಾಗವಾಗಿ ಬಂಟ್ವಾಳ ಬಿಜೆಪಿ ರೈತ ಮೋರ್ಚಾ ವತಿಯಿಂದ ರೈತ ಸಮ್ಮಾನ್ ಸಮಾವೇಶದಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಭಾಗವಹಿಸಿದರು.
ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಶಂಭೂರಿನಲ್ಲಿರುವ ಅರಣ್ಯ ಇಲಾಖೆ ನರ್ಸರಿಗೆ ಭೇಟಿ ನೀಡಿ ಈ ಸಾಲಿನಲ್ಲಿ ನೆಡಲು ಸಿದ್ಧಗೊಂಡಿರುವ ಗಿಡಗಳ ಕುರಿತು ಪರಿಶೀಲನೆ ನಡೆಸಿದರು. ಬಂಟ್ವಾಳದಲ್ಲಿ ಈ ಬಾರಿ 144 ಜಾತಿಯ 1.15 ಲಕ್ಷ ಗಿಡಗಳು ಸಿದ್ಧಗೊಂಡಿದ್ದು, 55 ಸಾವಿರ ಗಿಡಗಳನ್ನು ಸಾರ್ವಜನಿಕರಿಗೆ ಹಂಚಲಾಗುತ್ತದೆ, ಉಳಿದವುಗಳನ್ನು ಅರಣ್ಯ ಇಲಾಖೆಯ ಜಾಗಗಳಲ್ಲಿ ನೆಡಲಾಗುತ್ತದೆ.
ಕೋಲ್ನಾಡು, ಮೂಲ್ಕಿಯಲ್ಲಿ ನಡೆದ ಕೃಷಿ ಸಿರಿ- 2022 ರಾಜ್ಯಮಟ್ಟದ ಬೃಹತ್ ಕೃಷಿ ಮೇಳದ ಸಭಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರೊಂದಿಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಭಾಗವಹಿಸಿದರು.
ಇತ್ತೀಚೆಗೆ ಬಿರುಗಾಳಿಯಿಂದ ಹಾನಿಗೀಡಾದ ಬಡಗಕಜೆಕಾರ್, ತೆಂಕಕಜೆಕಾರ್, ಕಾವಳಮೂಡೂರು, ಉಳಿ, ಪಿಲಾತಬೆಟ್ಟು, ಇರ್ವತ್ತೂರು, ಸಂಗಬೆಟ್ಟು, ರಾಯಿ ಹಾಗೂ ಬಂಟ್ವಾಳ ಮತ್ತು ಪಾಣೆಮಂಗಳೂರು ಹೋಬಳಿಗಳ ಗ್ರಾಮಗಳ 110 ಜನ ಸಂತೃಸ್ತರಿಗೆ ಪ್ರಾಕೃತಿಕ ವಿಕೋಪದ ಪರಿಹಾರ ನಿಧಿಯ ಚೆಕ್‌ನ್ನು ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಕಚೇರಿಯಲ್ಲಿ ವಿತರಿಸಿದರು.
ಬಂಟ್ವಾಳದ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ, ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್, ರೋಟರಿ ಕ್ಲಬ್ ಉಪ್ಪಿನಂಗಡಿ ಆಶ್ರಯದಲ್ಲಿ ಇನ್ಫೋಸಿಸ್ ಸಂಸ್ಥೆ ವತಿಯಿಂದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದ ಸರಕಾರಿ ಪಾಲಿಟೆಕ್ನಿಕ್ ಗೆ 125 ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮದಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಭಾಗವಹಿಸಿದರು.
SSLC ಪರೀಕ್ಷೆಗೆ ವಿದ್ಯಾರ್ಥಿಗಳ ಪೂರ್ವತಯಾರಿಯ ಬಗ್ಗೆ ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯ ಕಚೇರಿಯಲ್ಲಿ ಪ್ರೌಢಶಾಲೆಯ ಮುಖ್ಯೋಪಧ್ಯಾಯರುಗಳೊಂದಿಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಸಭೆ ನಡೆಸಿದರು.
ಮಾಣಿ ಗ್ರಾಮದ ಭರಣಿಕೆರೆ ಎಂಬಲ್ಲಿ ರೂ 1.35 ಕೋಟಿ ವೆಚ್ಚದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಹಾಗೂ ಸಂಪರ್ಕ ಸೇತುವೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು. ಮಾಣಿ ಗ್ರಾಮದ ಅರ್ಬಿ ಎಂಬಲ್ಲಿ ಬರಿಮಾರ್ ಗ್ರಾಮ ಸಂಪರ್ಕಿಸುವ ರೂ.3.20 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ಹಾಗೂ ಸಂಪರ್ಕ ಸೇತುವೆ ನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು. ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ಅಮ್ಟೂರು ಗ್ರಾಮದ ಪೂವಳ ಎಂಬಲ್ಲಿ ರೂ. 1.80 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ಹಾಗೂ ಸಂಪರ್ಕ ಸೇತುವೆ ನಿರ್ಮಾಣದ ಕಾಮಗಾರಿಗೆ […]
ಸನ್ಮಾನ್ಯ ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಂದ ದ.ಕ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಪಾಲ್ಗೊಂಡರು.
ನೇತಾಜಿ ಕಿರಿಯ ಖಾಸಗಿ ಪ್ರಾಥಮಿಕ ಶಾಲೆ ಬುಡೋಳಿ ಇದರ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ನೆರವೇರಿಸಿದರು.