Rajesh Naik

ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯಕಾರಿಣಿ ಸಭೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆಯು ದಿನಾಂಕ 23-5-2017 ರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನ ಮಾಣಿಯಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಪಾಟಿಸಿ ಮಾತನಾಡಿದ ಕ್ಯಾ. ಬ್ರಿಜೇಶ್ ಚೌಟ ಕೇಂದ್ರ ಸರಕಾರದ 2 ವರ್ಷದ ಸಾಧನೆಗಳನ್ನು ಕಾರ್ಯಕರ್ತರು ಜನರಿಗೆ ತಿಳಿಸುವುದು, ಕರ್ನಾಟಕ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ಜನರಿಗೆ ತಿಳಿಸುವುದು ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

bjp-bantwal-karyakarini

ಸಮಾರೋಪ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್‌ರವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಪಕ್ಷಕ್ಕೆ ನೀಡಿದ ಕೊಡುಗೆಗಳನ್ನು ತಿಳಿಸಿದರು. ವೇದಿಕೆಯಲ್ಲಿ ಮಂಡಲದ ಅಧ್ಯಕ್ಷರು ಬಿ.ದೇವದಾಸ ಶೆಟ್ಟಿ, ಬಿಜೆಪಿ ಪ್ರಮುಖರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಜಿಲ್ಲಾ ಉಪಾಧ್ಯಾಕ್ಷರಾದ ಜಿ.ಆನಂದ, ಜಿಲ್ಲಾ ಕಾರ್ಯದರ್ಶಿ ಸುಗುಣ ಕಿಣಿ, ಜಿಲ್ಲಾ ವಕ್ತಾರರಾದ ವಿಕಾಸ್ ಪುತ್ತೂರು, ಜಿತೇಂದ್ರ ಕೊಟ್ಟಾರಿ, ಎಸ್.ಸಿ.ಮೋರ್ಚಾದ ಅಧ್ಯಕ್ಷರಾದ ದಿನೇಶ್ ಅಮ್ಟೂರು, ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ ಉಪಸ್ಥಿತರಿದ್ದರು.

Back To Top
Highslide for Wordpress Plugin