Rajesh Naik

ನಾಮಪತ್ರ ಸಲ್ಲಿಕೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ಶುಕ್ರವಾರ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬೆಳಿಗ್ಗೆ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪೂಜೆ ಸಲ್ಲಿಸಿ ನಂತರ ತಮ್ಮ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಸುಮಾರು 15 ಕಿ.ಮೀ. ಪಾದಯಾತ್ರೆ ಮೂಲಕ ಬಿ.ಸಿ. ರೋಡ್ ತಲುಪಿ ಸ್ಪರ್ಶ ಕಲಾಮಂದಿರದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಿದರು. ನಂತರ ತಹಶೀಲ್ದಾರ್ ಕಛೇರಿಗೆ ತೆರಳಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಸುವ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಕೋಟ ಶ್ರೀನಿವಾಸ ಪೂಜಾರಿ, ಪದ್ಮನಾಭ ಕೊಟ್ಟಾರಿ, ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು.

Nomination

Nomination (1)

Nomination (2)

Nomination (3)

 

Back To Top
Highslide for Wordpress Plugin