Rajesh Naik

ನೀರಿನ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ: ಶಾಸಕ ರಾಜೇಶ್ ನಾೖಕ್‌

ಬಂಟ್ವಾಳ : ಜನರಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ನೀರಿನ ಸಮಸ್ಯೆಯನ್ನು ಬಗೆಹರಿಸುವುದಾಗಿ ಶಾಸಕ ರಾಜೇಶ್ ನಾೖಕ್‌ ಅವರು ತಿಳಿಸಿದ್ದಾರೆ.

ಪುರಸಭಾ ವ್ಯಾಪ್ತಿಯ ಮನೆಗಳಿಗೆ ನೀರು ಪೂರೈಕೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾೖಕ್‌ ಅವರು ಜಕ್ರಿಬೆಟ್ಟು ಜಾಕ್‌ವೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನೀರಿನ ಸಮಸ್ಯೆ ಪರಿಹಾರಕ್ಕೆ ತುರ್ತುಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನದಿಯಲ್ಲಿ ನೀರಿನ ಮಟ್ಟ ಕುಸಿದ ಕಾರಣ ಸಮಗ್ರ ಕುಡಿಯುವ ನೀರಿನ ಯೋಜನೆಯ ಜಾಕ್‌ವೆಲ್ ಮೂಲಕ ನೀರನ್ನು ಮೇಲೆತ್ತಲು ಸಾಧ್ಯವಾಗುತ್ತಿಲ್ಲ. ಹಳೆ ಜಾಕ್‌ವೆಲ್ ಬಳಿ ನದಿ ಮೂಲಕ ನೀರು ಪೂರೈಕೆ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ಜಲಮಂಡಳಿಯ ಇಂಜಿನಿಯರ್ ಶೋಭಾಲಕ್ಷ್ಮಿ, ಪುರಸಭೆ ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೋ, ಪುರಸಭಾ ಸದಸ್ಯ ಗೋವಿಂದ ಪ್ರಭು ಹಾಜರಿದ್ದರು.

water-prblm-rn-soln

Back To Top
Highslide for Wordpress Plugin