Rajesh Naik

ಗ್ರಾಮ ಪಂಚಾಯತಿಗಳ ಬಲವರ್ಧನೆಗೆ ಕ್ರಮ : ಸಚಿವ ಶ್ರೀ ಕೆ.ಎಸ್. ಈಶ್ವರಪ್ಪ

ಪಂಚಾಯತ್ ರಾಜ್ ಕಾಯ್ದೆ ತಿದ್ದುಪಡಿ ತಂದು ಗ್ರಾಮ ಪಂಚಾಯತಿಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುವುದು, ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಯ ವೈಖರಿಯನ್ನು ರಾಜ್ಯಕ್ಕೆ ಮಾದರಿಯಾಗಿಸಿ ಗ್ರಾಮ ಪಂಚಾಯತಿಗಳನ್ನು ಸಕ್ರಿಯವಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಶ್ರೀ ಕೆ.ಎಸ್. ಈಶ್ವರಪ್ಪ ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ಶಾಸಕ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸರಪಾಡಿ ನರಿಕೊಂಬು ಯೋಜನೆಗಳಿಗೆ ಸುಮಾರು 8.4 ಕೋಟಿ ರೂ. ಅನುದಾನ ಬಿಡುಗಡೆ ಆಗಿರುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ದ. ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ, ಮತ್ತಿತರರು ಉಪಸ್ಥಿತರಿದ್ದರು.

ಕೊಳ್ನಾಡು ಗ್ರಾ.ಪಂ. ಅಧ್ಯಕ್ಷ ಸುಭಾಶ್‌ಚಂದ್ರ ಶೆಟ್ಟಿ ಮತ್ತು ವಿಟ್ಲಪಡ್ನೂರು ಗ್ರಾ.ಪಂ. ಅಧ್ಯಕ್ಷ ನವೀನ್ ಶೆಟ್ಟಿ ತಮ್ಮ ಗ್ರಾಮಗಳ ಸಾಧನೆಯ ಕುರಿತು ಬೆಳಕು ಚೆಲ್ಲಿದರು. ದ.ಕ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಂಟ್ವಾಳ ತಾಲೂಕು ಪಂಚಾಯತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ, ಕೃಷಿ ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಯು.ಪಿ. ಇಬ್ರಾಹಿಂ, ಬಂಟ್ವಾಳ ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪುತ್ತೂರು ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ, ಸಚಿವರ ವಿಶೇಷ ಅಧಿಕಾರಿ ಜಯರಾಮ, ತಹಸೀಲ್ದಾರ್ ರಶ್ಮಿ ಎಸ್.ಆರ್., ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದರು. ಯೋಜನಾ ನಿರ್ದೇಶಕ ಮಧುಕುಮಾರ ಸ್ವಾಗತಿಸಿದರು. ರಾಮಚಂದ್ರರಾವ್ ಕಾರ್ಯಕ್ರಮ ನಿರ್ವಹಿಸಿದರು.

gram-panc-dev-RN-1

gram-panc-dev-RN-2

gram-panc-dev-RN-3

Back To Top
Highslide for Wordpress Plugin