ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡರು.
ಲಸಿಕೆ ಪಡೆದ ಬಳಿಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಶಾಸಕರು, ತಾನು ಸರಕಾರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದುಕೊಂಡಿದ್ದು, 60 ವರ್ಷ ಮೇಲ್ಪಟ್ಟವರು ಹಾಗೂ ವಿವಿಧ ಖಾಯಿಲೆಯಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟ ಬಂಟ್ವಾಳದ ಜನತೆ ಕೋವಿಡ್ ಲಸಿಕೆ ಪಡೆಯುವಂತೆ ಮನವಿ ಮಾಡಿದರು. ಇದರಿಂದ ತಮಗೆ ಹಾಗೂ ಸಮಾಜಕ್ಕೆ ಒಳತಾಗುತ್ತದೆ. ಕೊರೊನಾದ 2ನೇ ಅಲೆಯ ಕುರಿತು ಜನತೆ ಆತಂಕದಲ್ಲಿದ್ದು, ಹೀಗಾಗಿ ತಮ್ಮ ಹಾಗೂ ಇತರರ ರಕ್ಷಣೆಯ ದೃಷ್ಟಿಯಿಂದ ಲಸಿಕೆ ಪಡೆಯುವುದು ಅಗತ್ಯವಾಗಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ವಿತರಣೆಯಾಗುತ್ತಿದ್ದು, ಜನತೆ ಇದರ ಪ್ರಯೋಜನ ಪಡೆಯಬೇಕಿದೆ ಎಂದರು.
ಶಾಸಕರ ಜೊತೆ ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಅವರು ಕೂಡ ಲಸಿಕೆ ಪಡೆದುಕೊಂಡರು. ಆಸ್ಪತ್ರೆಯ ವೈದ್ಯಾಧಿಕಾರಿಗಳು ಜತೆಗಿದ್ದರು.