Rajesh Naik

ಬಿ.ಸಿ.ರೋಡ್‍ನಲ್ಲಿ ನವಕರ್ನಾಟಕ ನಿರ್ಮಾಣಕ್ಕಾಗಿ ಚಿಂತನಾ ಸಭೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ನವಕರ್ನಾಟಕ ನಿರ್ಮಾಣಕ್ಕಾಗಿ ಚಿಂತನಾ ಸಭೆಯನ್ನು ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರಭಾವಿಗಳು ಪ್ರಣಾಳಿಕೆ ಸಮಿತಿಯ ಚಿಂತನಾ ಸಭೆಯಲ್ಲಿ ಭಾಗವಹಿಸಿ ಬಹು ಮುಖ್ಯವಾದ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಜಿಲ್ಲಾ ಪ್ರಣಾಳಿಕೆ ಸಮಿತಿಯ ಸಂಚಾಲಕ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಬೆಳ್ತಂಗಡಿ ಮಾಜಿ ಶಾಸಕರಾದ ಪ್ರಭಾಕರ ಬಂಗೇರ, ಮಾಜಿ ಮೇಯರ್ ಶಂಕರ್ ಭಟ್, ಉಮನಾಥ ಕೋಟ್ಯಾನ್, ಕ್ಷೇತ್ರ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಬಿಜೆಪಿ ನಾಯಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, ಮಾಜಿ ಶಾಸಕರಗಳಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಪ್ರಧಾನಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ವೆಂಕಟೇಶ್ ನಾವಡ, ವಿಜಯ ರೈ, ರಮನಾಥ ರಾಯಿ, ಸೀತಾರಾಮ ಪೂಜಾರಿ, ಗಣೇಶ್ ರೈ, ದಿನೇಶ್ ಭಂಡಾರಿ, ಸೀಮಾ ಮಾಧವ, ಧರ್ಣಮ್ಮ ಉಪಸ್ಥಿತರಿದ್ದರು. ಕ್ಷೇತ್ರ ಪ್ರಣಾಳಿಕೆ ಸಮಿತಿಯ ಸಂಚಾಲಕರಾದ ದೇವಪ್ಪ ಪೂಜಾರಿಯವರು ಸ್ವಾಗತಿಸಿದರು. ಕ್ಷೇತ್ರ ಪ್ರಧಾನಕಾರ್ಯದರ್ಶಿ ಮೋನಪ್ಪ ದೇವಸ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

BC-road-meeting-2

BC-road-meeting-1

Back To Top
Highslide for Wordpress Plugin