Rajesh Naik

ವಿಶೇಷ ಚೇತನರ ದಿನಾಚರಣೆ ಮತ್ತು ಪರಿಸರ ನಿರ್ಮಾಣ ಕಾರ್ಯಕ್ರಮ 2018 -19

ಬಂಟ್ವಾಳ: ಸಮಗ್ರ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ, ಕಾನೂನು ಸೇವಾ ಸಮಿತಿ ಬಂಟ್ವಾಳ ಹಾಗೂ ವಕೀಲರ ಸಂಘ ಬಂಟ್ವಾಳ ಇವರ ಸಹಯೋಗದಲ್ಲಿ ವಿಕಲಚೇತನ ಮಕ್ಕಳ ವಿಶ್ವ ‘ವಿಶೇಷ ಚೇತನರ ದಿನಾಚರಣೆ’ ಮತ್ತು ಪರಿಸರ ನಿರ್ಮಾಣ ಕಾರ್ಯಕ್ರಮ 2018 -19 ಬಿಸಿರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ‌

ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ರಾಜೇಶ್ ನಾೖಕ್‌ ಅವರು ವಿಶೇಷ ಮಕ್ಕಳ ಅಭಿವೃದ್ಧಿಗಾಗಿ ಸರಕಾರದ ಅನುದಾನದ ಜೊತೆಗೆ ಸಂಘ ಸಂಸ್ಥೆಗಳು ಕೈಜೋಡಿಸಿದಾಗ ಅವರು ಮುಖ್ಯವಾಹಿನಿಗೆ ಬರಲು ಸಾಧ್ಯ ವಾಗಬಹುದು. ಇಂತಹ ಮಕ್ಕಳಲ್ಲಿ ಅನೇಕ ಪ್ರತಿಭೆಗಳಿವೆ ಅದನ್ನು ಗುರುತಿಸಿ ಅವರಿಗೆ ಅವಕಾಶ ಕಲ್ಪಿಸುವ ಕೆಲಸ ಬೇಕಾಗಿದೆ. ವಿಕಲಚೇತನ ಮಕ್ಕಳನ್ನು ಪ್ರತ್ಯೇಕ ಮಾಡದೆ ನಮ್ಮ ಜೊತೆಯಾಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ವಿಕಲಚೇತನ ಮಕ್ಕಳಿಗೆ ಕರುಣೆ ತೋರಿಸುವ ಬದಲು ಸ್ಥೈರ್ಯ ಕೊಡುವ ಕೆಲಸ ಮಾಡೋಣ ಎಂದು ಅವರು ತಿಳಿಸಿದರು.

ಕೇವಲ ಒಂದು ದಿನದ ಆಚರಣೆಯಾಗದೆ ನಿತ್ಯ ಅವರ ಜೊತೆಯಾಗಿ ರೋಣ, ಇಂತಹ ಕಾರ್ಯಕ್ರಮಗಳು ಗ್ರಾಮೀಣ ಭಾಗದಲ್ಲಿಯೂ ನಡೆಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ ಸರಕಾರ ಮತ್ತು ಲಯನ್ಸ್ ಕ್ಲಬ್ ನಂತಹ ಸಮಾಜಮುಖಿ ಸಂಘಟನೆಗಳು ವಿಶೇಷ ಮುತುವರ್ಜಿಯಿಂದ ವಿಕಲಚೇತನ ಮಕ್ಕಳ ಭವಿಷ್ಯ ರೂಪಿಸುವ ಕೆಲಸ ಮಾಡುತ್ತಿರುವುದು ಅಭಿನಂದನೀಯ ಎಂದರು.

ಮಗುವಿಗೆ ಶಕ್ತಿ ಸಾಮರ್ಥ್ಯವನ್ನು ತುಂಬುವ ಕೆಲಸ ನಾವೆಲ್ಲರೂ ಸೇರಿ ಮಾಡುವದರ ಜೊತೆ ಪೋಷಕರಿಗೆ ಧೈರ್ಯ ತುಂಬುವ ಕೆಲಸ ಮಾಡುವ ಎಂದರು. ಹಕ್ಕುಗಳನ್ನು ಅವರಿಗೆ ನೀಡಿ ನಮ್ಮ ಕರ್ತವ್ಯಗಳನ್ನು ಸರಿಯಾಗಿ ಪಾಲಿಸೋಣ, ಸಮಾಜ ಅವರ ಜೊತೆಯಲ್ಲಿ ಬೆರತು ಸಹಾಯ ಹಸ್ತ ನೀಡೋಣ ಎಂದು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು.

ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ ಮಾತನಾಡಿ ಇಂತಹ ಮಕ್ಕಳ ಮನಸ್ಸು ಗೆದ್ದು , ಪ್ರೀತಿಯ ಜೊತೆ ಶಿಕ್ಷಣ ನೀಡುವ ಶಿಕ್ಷಕಿಯರಿಗೆ ವಿಶೇಷ ಅಭಿನಂದನೆ ಸಲ್ಲಬೇಕು ಎಂದರು.

ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಆಚಾರ್ಯ, ರೋಟರಿ ಆದ್ಯಕ್ಷ ಮಂಜುನಾಥ ಆಚಾರ್ಯ, ವಕೀಲರ ಸಂಘದ ಅಧ್ಯಕ್ಷ ದೀಪಕ್ ಜೈನ್, ಲಯನೆಸ್ ಕ್ಲಬ್ ಅಧ್ಯಕ್ಷೆ ವ್ರಂದಾ ಕುಡ್ವ, ತಾಲೂಕು ಪಂಚಾಯತ್ ಇ.ಒ.ರಾಜಣ್ಣ , ಸಂಪನ್ಮೂಲ ವ್ಯಕ್ತಿ ನಿವ್ರತ್ತ ಪ್ರಾಧ್ಯಾಪಕ ರಾಜಮಣಿ ರಾಮಕುಂಜ, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ರಮೇಶ್ ನಾಯಕ್ ರಾಯಿ, ಸಮಯನ್ವಯಾಧಿಕಾರಿ ರಾಧಾಕೃಷ್ಣ ಉಪಸ್ಥಿತರಿದ್ದರು.

ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿ ಭಾಗ್ಯಶ್ರೀ ಮತ್ತು ಕೌಶಿಕನನ್ನು ಶಾಸಕರು ಸನ್ಮಾನಿಸದರು. ವಿಕಲಚೇತನ‌ ಮಕ್ಕಳಿಗೆ ಏರ್ಪಡಿಸಲಾಗಿದ್ದ ಕ್ರೀಡೆ ಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ನೀಡಲಾಯಿತು. ‌

ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಸ್ವಾಗತಿಸಿದರು. ಲಯನ್ ದಾಮೋದರ್ ವಂದಿಸಿದರು. ಬಿ.ಐ.ಇ.ಆರ್.ಟಿ. ಸುರೇಖಾ ಕಾರ್ಯಕ್ರಮ ನಿರೂಪಿಸಿದರು.

RN-specially-abled-2

RN-specially-abled-1

Back To Top
Highslide for Wordpress Plugin