Rajesh Naik

ಬಿ.ಸಿ ರೋಡ್ ಸುಂದರೀಕರಣ : ಪೂರ್ವ ತಯಾರಿ ಸಭೆ

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮಹಾತ್ವಾಕಾಂಕ್ಷೆಯ ಬಿ.ಸಿ ರೋಡ್ ನಗರದ ಸುಂದರೀಕರಣ ಯೋಜನೆಗೆ ಶಿಲಾನ್ಯಾಸ ಅಕ್ಟೋಬರ್ 21 ಸೋಮವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು ಕಂದಾಯ ಸಚಿವರಾದ ಆರ್.ಅಶೋಕ್, ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷರು ಸಂಸದ ನಳಿನ್ ಕುಮಾರ್ ಕಟೀಲುರವರು ಮತ್ತು ಗಣ್ಯರು ಭಾಗವಹಿಸಲಿದ್ದು ಕಾರ್ಯಕ್ರಮದ ಪೂರ್ವ ತಯಾರಿಯ ಬಗ್ಗೆ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು.

ಈ ಸಂಧರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ ಭಟ್,ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಜಿಲ್ಲಾ ವಕ್ತಾರ ಹರಿಕೃಷ್ನ ಬಂಟ್ವಾಳ,ಕ್ಷೇತ್ರ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

BC-road-pre-meeting-1

BC-road-pre-meeting-2

Back To Top
Highslide for Wordpress Plugin