ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಕ್ಷೇತ್ರದ ವಿಶೇಷ ಕಾರ್ಯಕಾರಣಿ ಸಭೆಯು ಗೀತಾಂಜಲಿ ಸಭಾ ಭವನದಲ್ಲಿ ಜರಗಿತು. ಕಾರ್ಯಕಾರಣಿಯನ್ನು ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉದ್ಛಾಟಿಸಿದರು. ಮುಂದಿನ ದಿನಗಳಲ್ಲಿ ನಡೆಯುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ನಿಷ್ಠೆಯಿಂದ ಪಕ್ಷದ ಕೆಲಸ ಮಾಡಿ ಕೇತ್ರದ 39 ಗ್ರಾಮ ಪಂಚಾಯತ್ನಲ್ಲಿ 39 ನ್ನು ಗೆಲ್ಲಿಸಿ ಕೊಡುವ ಸಂಕಲ್ಪದೊಂದಿಗೆ ಕಾರ್ಯಕರ್ತರು ಕೆಲಸ ಮಾಡಿ ಎಂದು ಕರೆ ನೀಡಿದರು. ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸಿ ಕ್ಷೇತ್ರದಲ್ಲಿ ಈಗಾಗಲೇ ಕೋಟ್ಯಾಂತರ ಅನುದಾನ ರಸ್ತೆ ಇನ್ನಿತರ ಅಭಿವೃದ್ಧಿ ಕೆಲಸಗಳು ನಡೆದಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕಲ್ಪದೊಂದಿಗೆ ನಿಮ್ಮೊಂದಿಗೆ ಕೆಲಸ ಮಾಡುತ್ತೇನೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿ ವಹಿಸಿದ್ದರು. ಸಭೆಯಲ್ಲಿ ಕ್ಷೇತ್ರ ಉಸ್ತುವಾರಿ ಜಿಲ್ಲಾ ಪ್ರ.ಕಾರ್ಯದರ್ಶಿ ಸುಧೀರ್ ಶೆಟ್ಟಿ, ಕಿಯೊನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಪ್ರ.ಕಾರ್ಯದರ್ಶಿ ರಾಮ್ದಾಸ್ ಬಂಟ್ವಾಳ್, ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಬೂಡದ ಅಧ್ಯಕ್ಷರಾದ ದೇವದಾಸ್ ಶೆಟ್ಟಿ, ಕರ್ನಾಟಕ ರಾಜ್ಯದ ನೀರು ಸರಬರಾಜು ಮತ್ತು ಒಳಚರಂಡಿ ನಿಗಮ ನಿರ್ದೇಶಕಿ ಸುಲೋಚನಾ ಜಿ ಕೆ ಭಟ್ ಇವರನ್ನು ಅಭಿನಂದಿಸಲಾಯಿತು. ಕ್ಷೇತ್ರ ಪ್ರ.ಕಾರ್ಯದರ್ಶಿ ರವೀಶ್ ಶೆಟ್ಟಿ ಸ್ವಾಗತಿಸಿದರು. ಕ್ಷೇತ್ರ ಉಪಾಧ್ಯಕ್ಷರಾದ ವಜ್ರನಾಥ ಕಲ್ಲಡ್ಕ ವಂದಿಸಿದರು. ಕಾರ್ಯಕ್ರಮ ನಿರೂಪಣೆ ಡೊಂಬಯ ಅರಳ ನಿರ್ವಹಿಸಿದರು.