Rajesh Naik

ಮೋದಿ ನೇತೃತ್ವದ ಬಿಜೆಪಿ ಸ್ವಂತಬಲದಿಂದ ಅಧಿಕಾರಕ್ಕೆ ಬರಬೇಕಾಗಿದೆ -ಬಿ.ನಾಗರಾಜ ಶೆಟ್ಟಿ

ಬಂಟ್ವಾಳ; ದೇಶದಲ್ಲಿ ಬದಲಾವಣೆ ಅನಿವಾರ್ಯವಾಗಿದೆ, ಇದಕ್ಕಾಗಿ ಕೇಂದ್ರದಲ್ಲಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸ್ವಂತಬಲದಿಂದ ಅಧಿಕಾರಕ್ಕೆ ಬರಬೇಕಾಗಿದೆ ಎಂದು ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಹೇಳಿದ್ದಾರೆ.ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿದಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸಾರಥ್ಯದಲ್ಲಿ ನಡೆಯುತ್ತಿರುವ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಪಾದಯಾತ್ರೆಯ 10 ನೇ ದಿನವಾದ ಗುರುವಾರ ಸಂಜೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಪೇಟೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.

siddaktte--padayatr

ದೇಶ ಎದುರಿಸುತ್ತಿರುವ ಭಯೋತ್ಪಾದನೆ, ನಕ್ಸಲಿಸಂ, ಭ್ರಷ್ಟಾಚಾರ, ಬೆಲೆಏರಿಕೆ, ಅತ್ಯಾಚಾರದಂತಹ ಜ್ವಲಂತ ಸಮಸ್ಯೆಗಳಿಗೆ ಬಿಜೆಪಿಯೊಂದೇ ಪರಿಹಾರ ಎಂದ ಅವರು, ಕಾಂಗ್ರೇಸ್ ಸರ್ಕಾರದಿಂದ ರಸ್ತೆಗಳ ಗುಂಡಿಮುಚ್ಚುವ ಕನಿಷ್ಠ ಅಭಿವೃದ್ದಿ ಕಾರ್ಯವೂ ನಡೆದಿಲ್ಲ ಎಂದು ಆರೋಪಿಸಿದರು.ಗ್ರಾಮಮಟ್ಟದಲ್ಲೂ ಪಕ್ಷ ಸಂಘಟನೆಯ ಕಾರ್ಯ ನಡೆಯಬೇಕಾಗಿದೆ, ಜಿಲ್ಲೆಯ ಜನ ಬುದ್ದಿವಂತರು ಎಂಬುದನ್ನು ತೋರಿಸಿಕೊಡಬೇಕಾಗಿದೆ ಎಂದ ಅವರು ಪ್ರತೀ ಬೂತ್ ಮಟ್ಟದಿಂದ ಕ್ಷೇತ್ರಮಟ್ಟದ ವರೆಗೆ ಪಕ್ಷವನ್ನು ಗಟ್ಟಿಗೊಳಿಸಬೇಕೆಂದರು.

ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಜಿ.ಆನಂದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಚಾಲಕ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದೇವದಾಸ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ವೇದಿಕೆಯಲ್ಲಿ ಉಪಸ್ಥಿತರಿದ್ದ “ಗ್ರಾಮದೆಡೆಗೆ -ಬಿಜೆಪಿ ನಡಿಗೆ ” ಪಾದಯಾತ್ರೆಯ ನೇತಾರ ಉಳಿಪಾಡಿ ಗುತ್ತು ರಾಜೇಶ್ ನಾಯ್ಕ್ ಮಾತನಾಡಿ, ನರೇಂದ್ರ ಮೋದಿಗೆ ಪ್ರತಿಸ್ಪರ್ಧೆ ನೀಡಲು ಕಾಂಗ್ರೇಸಿನಲ್ಲಿ ನಾಯಕರೇ ಇಲ್ಲ, ಇದಕ್ಕಾಗಿ ಕಾಂಗ್ರೇಸ್ ತನ್ನ ಪ್ರಧಾನಿ ಅಭ್ಯರ್ಥಿಯ ಘೋಷಣೆಗೆ ಹಿಂದೇಟು ಹಾಕುತ್ತಿದೆ ಎಂದರು.

ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಉಪಾಧ್ಯಕ್ಷ ಪುರುಷ ಎನ್ ಸಾಲ್ಯಾನ್ ನೆತ್ರಕೆರೆ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಷ್ಟೇ ಮಹತ್ವದ್ದಾಗಿದ್ದು, ದೇಶದ ಸುಂದರ ಭವಿಷ್ಯಕ್ಕಾಗಿ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಬೇಕಿದೆ, ಇದಕ್ಕಾಗಿ ಯುವಜನಾಂಗ ಜಾಗೃತರಾಗಬೇಕು ಎಂದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಮಾತನಾಡಿ, ರಾಜ್ಯದಲ್ಲಿ ಹೆಸರಿಗೆ ಮಾತ್ರ ಕಾಂಗ್ರೇಸ್ ಅಧಿಕಾರದಲ್ಲಿದ್ದು, ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದಲ್ಲಿರುವ ಬಹುತೇಕರು ನೈಜ ಕಾಂಗ್ರೇಸಿಗರಲ್ಲ ಎಂದರು.ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಸುಲೋಚನಾ ಜಿಕೆ ಭಟ್ ಮಾತನಾಡಿದರು.

ಪಕ್ಷದ ಪ್ರಮುಖರಾದ ದಿನೇಶ್ ಭಂಡಾರಿ, ರಾಜೇಶ್ ಶೆಟ್ಟಿ ಪಜೀರು, ರಾಮದಾಸ್ ಬಂಟ್ವಾಳ, ಪೃಥ್ವಿರಾಜ್, ಸಂದೇಶ್ ಶೆಟ್ಟಿ, ದೇವಪ್ಪ ಪೂಜಾರಿ, ರೊನಾಲ್ಡ್ ಡಿಸೋಜ ಅಮ್ಟಾಡಿ , ದಿನೇಶ್ ಅಮ್ಟೂರು, ಅಬ್ದುಲ್ ರಝಾಕ್, ಆನಂದ ಕುಲಾಲ್, ರೇವತಿ ಆರ್ ಪೂಜಾರಿ, ವಿಶಾಲಾಕ್ಷಿ, ಶ್ರೀಮತಿ ಬೇಬಿ ಮತ್ತಿತರರು ಉಪಸ್ಥಿತರಿದ್ದರು. ಗ್ರಾ.ಪಂ.ಸದಸ್ಯರಾದ ಶ್ರೀಧರ ಎಸ್.ಪಿ ಸ್ವಾಗತಿಸಿದರು, ರತ್ನಕುಮಾರ್ ಚೌಟ ವಂದಿಸಿದರು. ಸುಂದರ ಶೆಟ್ಟಿಗಾರ್ ಕಾರ್ಯಕ್ರಮ ನಿರ್ವಹಿಸಿದರು.

Back To Top
Highslide for Wordpress Plugin