Rajesh Naik

ಪಳನೀರುಗುಡ್ಡೆ: ಕುಡಿಯುವ ನೀರಿನ ಟ್ಯಾಂಕ್‌ಗೆ ಶಿಲಾನ್ಯಾಸ

ಬಾಳ್ತಿಲ ಗ್ರಾ.ಪಂ.ವ್ಯಾಪ್ತಿಯ ಪಳನೀರುಗುಡ್ಡೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ರೂ 10.50 ಲಕ್ಷ ಜಿ.ಪಂ.ಅನುದಾನದ ಕಾಮಗಾರಿಗೆ ಶಿಲಾನ್ಯಾಸ ನಡೆಯಿತು. ಈ ಸಂಧರ್ಭದಲ್ಲಿ ಶಾಸಕರಾದ ರಾಜೇಶ್ ನಾೖಕ್‌ ಉಳಿಪ್ಪಾಡಿ, ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಮಾಜಿ ಜಿ.ಪಂ ಸದಸ್ಯ ಆರ್.ಚೆನ್ನಪ್ಪ ಕೋಟ್ಯಾನ್, ತಾ.ಪಂ.ಸದಸ್ಯೆ ಲಕ್ಷ್ಮೀಗೊಪಾಲಚಾರ್ಯ, ಗ್ರಾ.ಪಂ.ಅಧ್ಯಕ್ಷ ವಿಠಲ ನಾಯ್ಕ, ಉಪಾಧ್ಯಕ್ಷೆ ಪೂರ್ಣಿಮ, ಪಂಚಾಯತ್ ಸದಸ್ಯರಾದ ಸುಂದರ ಸಾಲಿಯಾನ್, ವೆಂಕಟರಾಯ ಪ್ರಭು, ಗ್ರಾಮ ಸಮಿತಿ ಅಧ್ಯಕ್ಷ ಲೋಕಾನಂದ ಪೂಜಾರಿ, ವಿಶ್ವ ಹಿಂದು ಪರಿಷತ್ ವಿಟ್ಲ ತಾಲೂಕು ಅಧ್ಯಕ್ಷ ಕ.ಕೃಷ್ಣಪ್ಪ ,ರಮೇಶ್ ಕುದ್ರೆಬೆಟುಶಿನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Read More

ಮೆಲ್ಕಾರ್‌: ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷದ ಚೆಕ್‌ ವಿತರಣೆ

ಇತ್ತೀಚೆಗೆ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್‌ನಲ್ಲಿ ಮರಬಿದ್ದು ಮೃತನಾದ ಉತ್ತರಪ್ರದೇಶದ ದಿ.ರಾಮ ಸೇವಕ್ ಇವರ ಪತ್ನಿಯಾದ ನಿರ್ಮಲದೇವಿಯವರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷದ ಚೆಕ್‌ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್‌ ಉಳಿಪ್ಪಾಡಿಯವರು ವಿತರಿಸಿದರು. ಈ ಸಂಧರ್ಭದಲ್ಲಿ ರಮನಾಥ ರಾಯಿ, ಪ್ರಭಾಕರ ಪ್ರಭು, ಪುರುಷೋತ್ತಮ ಶೆಟ್ಟಿ, ಬಾಲಕೃಷ್ಣ ಸೆರ್ಕಳ, ಅಭಿಷೇಕ್ ಸುವರ್ಣ ಉಪಸ್ಥಿತರಿದ್ದರು.

Read More

ಕಡೇಶ್ವಾಲ್ಯ ರಸ್ತೆ ಅಭಿವೃದ್ಧಿಗೆ ಚಾಲನೆ

ಪೆರ್ಲಾಪು ಜಂಕ್ಷನ್ ಗಡಿಯಾರದಿಂದ ಕಡೇಶ್ವಾಲ್ಯ ರಸ್ತೆ ಅಭಿವೃದ್ಧಿಗೆ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾೖಕ್‌ ಉಳಿಪ್ಪಾಡಿಯವರು ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕಮಲಾಕ್ಷಿ ಕೆ.ಪೂಜಾರಿ, ಪಂಚಾಯತ್ ಅಧ್ಯಕ್ಷರು ಶ್ಯಾಮಲ, ಪಂಚಾಯತ್ ಉಪಾಧ್ಯಕ್ಷರು ಸುರೇಂದ್ರ ರಾವ್, ಪ್ರೌಢಶಾಲಾ ಅಧ್ಯಕ್ಷರು ತಿರುಮಲೇಶ್ವರ ಭಟ್, ಮಾಜಿ ತಾ.ಪಂ.ಸದಸ್ಯರು ಬಾಬು ಮುಗೇರ, ಮಾಜಿ ಎಪಿಎಂಸಿ ಅಧ್ಯಕ್ಷರು ಸಾಂತಪ್ಪ ಪೂಜಾರಿ, ಪಂಚಾಯತ್ ಸದಸ್ಯರುಗಳಾದ ಸುರೇಶ್ ಬನಾರಿ, ಸನತ್ ಆಳ್ವ, ಸುರೇಶ್ ಕಣ್ಣೋಟ್ಟು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Read More

ಬಂಟರ ಸಂಘ ಬಂಟವಾಳ ತಾಲೂಕು (ರಿ.) – ವಾರ್ಷಿಕ ಕ್ರೀಡೋತ್ಸವ 2018

ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು (ರಿ.) ವಲಯ ಬಂಟರ ಸಂಘ ಸಜೀಪ ವಲಯ ಇವರ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಮಿತ್ತಮಜಲು ಗದ್ದೆಯ ಕ್ರೀಡಾಂಗಣದಲ್ಲಿ ನಡೆದ ವಾರ್ಷಿಕ ಕ್ರೀಡೋತ್ಸವ 2018 ಇದರ ಸಮಾರೋಪ ಸಮಾರಂಭ ಬಂಟರ ಸಂಘ ಬಂಟವಾಳ ವಲಯ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಶಿಸ್ತು ಬದ್ಧ ಕ್ರೀಡಾಕೂಟದ ಮೂಲಕ ಯಶಸ್ಸು ಸಾಧಿಸಲು ಪ್ರಯತ್ನಿಸಿದ ಎಲ್ಲಾ ವಲಯದವರಿಗೂ ಅಭಿನಂದನೆ ಸಲ್ಲಿಸಿದರು. ಬೇರೆ ಬೇರೆ ವಲಯಗಳಲ್ಲಿ ಇಂತಹ ಕ್ರೀಡಾಕೂಟಗಳು ಯಶಸ್ವಿಯಾಗಿ ನಡೆಸಿಕೊಂಡು ಹೋಗಲು […]

Read More

ವಿಶೇಷ ಚೇತನರ ದಿನಾಚರಣೆ ಮತ್ತು ಪರಿಸರ ನಿರ್ಮಾಣ ಕಾರ್ಯಕ್ರಮ 2018 -19

ಬಂಟ್ವಾಳ: ಸಮಗ್ರ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ, ಕಾನೂನು ಸೇವಾ ಸಮಿತಿ ಬಂಟ್ವಾಳ ಹಾಗೂ ವಕೀಲರ ಸಂಘ ಬಂಟ್ವಾಳ ಇವರ ಸಹಯೋಗದಲ್ಲಿ ವಿಕಲಚೇತನ ಮಕ್ಕಳ ವಿಶ್ವ ‘ವಿಶೇಷ ಚೇತನರ ದಿನಾಚರಣೆ’ ಮತ್ತು ಪರಿಸರ ನಿರ್ಮಾಣ ಕಾರ್ಯಕ್ರಮ 2018 -19 ಬಿಸಿರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ‌ ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ರಾಜೇಶ್ ನಾೖಕ್‌ ಅವರು […]

Read More

ಬಂಟ್ವಾಳದ ವಿವಿಧ ಸರಕಾರಿ ಪ.ಪೂ ಕಾಲೇಜು ಕಟ್ಟಡ ನಿರ್ಮಾಣಕ್ಕೆ ರೂ. 3.55 ಕೋಟಿ ಮಂಜೂರು

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಸರಕಾರಿ ಪದವಿ ಪೂರ್ವ ಕಾಲೇಜಿನ ತರಗತಿ ಕೋಣೆ, ಲ್ಯಾಬ್ ಕೊಠಡಿ, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಸರ್ಕಾರದಿಂದ ರೂ. 3 ಕೋಟಿ 55 ಲಕ್ಷ ರೂ. ಮಂಜೂರಾತಿಗೊಂಡಿದ್ದು ಶೀಘ್ರ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಬಂಟ್ವಾಳ ಕ್ಷೇತ್ರ ದ ಶಾಸಕ ರಾಜೇಶ್ ರಾಜೇಶ್ ನಾೖಕ್‌ ಉಳಿಪ್ಪಾಡಿಗುತ್ತು ತಿಳಿಸಿದ್ದಾರೆ.  ಸಿದ್ಧಕಟ್ಟೆ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ , ಅವರು ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಉದ್ಯೋಗ ಬಯಸಿ ವ್ಯಾಸಂಗ […]

Read More

ಬಂಟ್ವಾಳ ತಾಲೂಕು ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ 2018-19

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ.) ಬಂಟ್ವಾಳ ತಾಲೂಕು ಶಾಖೆ ಇದರ ವತಿಯಿಂದ ಬಂಟ್ವಾಳ ತಾಲೂಕು ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ 2018-19 ಕಾರ್ಯಕ್ರಮ ಡಿ.1 ಶನಿವಾರ ಮತ್ತು2 ಅದಿತ್ಯವಾರ ಬಂಟ್ವಾಳ ಎಸ್.ವಿ.ಎಸ್.ದೇವಳದ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾೖಕ್‌ ಉಳಿಪ್ಪಾಡಿಗುತ್ತು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು ಸರಕಾರಿ ನೌಕರರು ಮಾನಸಿಕವಾಗಿ ದೈಹಿಕವಾಗಿ ಬಲಾಢ್ಯರಾಗಲು ಕ್ರೀಡೆ ಸಹಕಾರಿಯಾಗಲಿದೆ. ಕ್ರೀಡೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನವೂ ತೊಡಗಿಸಲು […]

Read More

ಭಾರತೀಯ ಜನತಾ ಪಾರ್ಟಿ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯಕಾರಿಣಿ ಸಭೆಯು ಬಿ.ಸಿ.ರೋಡಿನ ಗೀತಾಂಜಲಿ ಸಭಾಭವನದಲ್ಲಿ ಜರಗಿತು. ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾೖಕ್‌ ಉಳಿಪ್ಪಾಡಿಯವರು ಕಾರ್ಯಕ್ರಮ ಉದ್ಫಾಟಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದನ್ನು ನೋಡಲು ವಿಶ್ವವೇ ಕಾತರದಿಂದ ಇರುವ ಈ ಸಂಧರ್ಭದಲ್ಲಿ ಬಿಜೆಪಿಯ ಕಾರ್ಯಕರ್ತರು ಸಂಘಟಿತರಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೆಲಸಕಾರ್ಯಗಳನ್ನು ಮಾಡಲು ಕರೆ ನೀಡಿದರು. ವೇದಿಕೆಯಲ್ಲಿ ಬಂಟ್ವಾಳ ಕ್ಷೇತ್ರ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ,ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ ಭಟ್, […]

Read More

ಗ್ರಾ.ಪಂ ಅಧ್ಯಕ್ಷರಿಗೆ ಗೈಡ್ ಮಾಡಿ, ಓವರ್ ಟೇಕ್ ಮಾಡಬೇಡಿ: ಅಧಿಕಾರಿಗಳಿಗೆ ಶಾಸಕರ ಸಲಹೆ

ಬಿ.ಸಿ ರೋಡಿನ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ದಿನಾಂಕ 27-11-2018ರಂದು ಗ್ರಾಮ ಮಟ್ಟದ ಅಧಿಕಾರಿಗಳು ಹಾಗೂ ಗ್ರಾ.ಪಂ ಅಧ್ಯಕ್ಷರುಗಳ ವಿಶೇಷ ಪ್ರಗತಿ ಪರಿಶೀಲನಾ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮಾತನಾಡಿದ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್‌ ನಾವು ಪ್ರಜಾಪ್ರಭುತ್ವದಡಿ ಕೆಲಸ ಮಾಡುತ್ತಿದ್ದೇವೆ ಎಂಬುದು ಗಮನದಲ್ಲಿರಲಿ, ಗ್ರಾ.ಪಂ ಅಧ್ಯಕ್ಷರಿಗೆ ಗೈಡ್ ಮಾಡಿ, ಓವರ್ ಟೇಕ್ ಮಾಡಲು ಹೋಗಬೇಡಿ ಎಂದು ಸಲಹೆ ನೀಡಿದ್ದಾರೆ. ಅಧಿಕಾರಿಗಳು ಗ್ರಾ.ಪಂ ಜನಪ್ರತಿನಿಧಿಗಳೊಂದಿಗೆ ಸ್ಪಂದಿಸದಿದ್ದರೆ ಅಂಥ ಅಧಿಕಾರಿಗಳ ವಿರುದ್ಧ ಲಿಖಿತವಾಗಿ ಮೇಲಾಧಿಕಾರಿಗಳಿಗೆ ದೂರು ನೀಡಿ, ಅಧಿಕಾರಿಗಳು ಉದಾಸೀನ ಮನೋಭಾವನೆಯಿಂದ ಹೊರಬರಬೇಕು ಎಂದು […]

Read More

ಅಟೋ ರಿಕ್ಷಾ ಚಾಲಕರ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ: ರಾಷ್ಟ್ರೀಯತೆಯ ಜೊತೆ ವೃತ್ತಿ ಧರ್ಮದ ಬದುಕು ಕಟ್ಟಿಕೊಂಡು ಸಮಾಜದ ಎಲ್ಲಾ ವರ್ಗದವರಿಗೆ ಪ್ರೀತಿ ಪಾತ್ರರಾಗಿರುವ ರಿಕ್ಷಾ ಚಾಲಕರ ಸಂಘಟನೆ ಇತರ ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾೖಕ್‌ ಹೇಳಿದರು. ‌ ಅವರು ಲಯನ್ಸ್ ಸೇವಾ ಮಂದಿರದಲ್ಲಿ ಅಟೋ ರಿಕ್ಷಾ ಚಾಲಕರ ಮಾಲಕರ ಸಂಘ ( ಬಿ.ಯಂ.ಎಸ್ ಸಂಯೋಜಿತ ಮೋಟಾರ್ & ಜನರಲ್ ಮಜ್ದೂರ್ ಸಂಘದ ಘಟಕ) ಬಿ.ಸಿ.ರೋಡ್ ಇದರ ವಾರ್ಷಿಕ ಮಹಾಸಭೆಯ ಕಾರ್ಯಕ್ರಮವನ್ನು‌ ಉದ್ಘಾಟಿಸಿ ಮಾತನಾಡಿದರು. ಸಂಘಟನೆಯ ಉದ್ದೇಶಗಳನ್ನು ಅರಿತುಕೊಂಡು ವೃತ್ತಿ ರಂಗದಲ್ಲಿ […]

Read More

Back To Top
Highslide for Wordpress Plugin