Rajesh Naik

ಸಜಿಪಮುನ್ನೂರು ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ

ದಕ್ಷಿಣ ಕನ್ನಡ ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಸಜಿಪಮುನ್ನೂರು ಶಾಲೆಯಲ್ಲಿ ರೂ. 42 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ  ನೂತನ ತರಗತಿ ಕೊಠಡಿಗಳನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟನೆ ಮಾಡಿದರು.

Read More

ಬಂಟ್ವಾಳ ಬಿ. ಸಿ. ರೋಡ್‌ನಲ್ಲಿ ನೂತನ ಪ್ರೆಸ್ ಕ್ಲಬ್ ಕಚೇರಿ ಲೋಕಾರ್ಪಣೆ

ಬಂಟ್ವಾಳ ತಾಲೂಕಿನ ಪತ್ರಕರ್ತರಿಗೆ ಸ್ವಂತ ಕಚೇರಿ ಹೊಂದುವುದು ದಶಕಗಳ ಕನಸಾಗಿದ್ದು ಬಂಟ್ವಾಳದ ಹೃದಯಭಾಗ ಬಿ. ಸಿ. ರೋಡ್‌ನಲ್ಲಿ ನೂತನ ಪ್ರೆಸ್ ಕ್ಲಬ್ ಕಚೇರಿಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಲೋಕಾರ್ಪಣೆ ಮಾಡಿದರು. ಆ ಮೂಲಕ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಬಹುಕಾಲದ ಬೇಡಿಕೆಯೊಂದನ್ನು ಈಡೇರಿಸಲಾಗಿದೆ.

Read More

ಕಾಮಾಜೆ ಸೌಂದರ್ಯ ನಗರ : ಕಾಂಕ್ರೀಟೀಕೃತ ರಸ್ತೆ ಕಾಮಗಾರಿ ಉದ್ಘಾಟನೆ

ಬಂಟ್ವಾಳ ಪುರಸಭೆ ವ್ಯಾಪ್ತಿಯ ಕಾಮಾಜೆ ಸೌಂದರ್ಯ ನಗರವನ್ನು ಸಂಪರ್ಕಿಸುವ ರೂ. 8.5 ಲಕ್ಷ ಅನುದಾನದ ಕಾಂಕ್ರೀಟೀಕೃತ ರಸ್ತೆ ಕಾಮಗಾರಿಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟನೆ ಮಾಡಿದರು.

Read More

ಸಜಿಪಮುನ್ನೂರು ಜಿ. ಪಂ. ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮ

ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ನಡೆದ ಸಜಿಪಮುನ್ನೂರು ಜಿ. ಪಂ. ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು. 362 ಕ್ಕೂ ಅಧಿಕ ಫಲಾನುಭವಿಗಳಿಗೆ ವಿವಿಧ ಇಲಾಖೆಯ ಸವಲತ್ತುಗಳನ್ನು ನೀಡಲಾಯಿತು.ಕಾರ್ಯಕ್ರಮದಲ್ಲಿ ಬಂದ 58 ಅರ್ಜಿಗಳನ್ನು ಸ್ಥಳದಲ್ಲಿಯೇ ಅಧಿಕಾರಿಗಳ ಮೂಲಕ ವಿಲೆವಾರಿ ಮಾಡಲಾಯಿತು.

Read More

ಬಂಟ್ವಾಳ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಂಟ್ವಾಳ ಪುರಸಭೆ ವ್ಯಾಪ್ತಿಯ ಮನೆ ನಿವೇಶನ ಹಕ್ಕುಪತ್ರ, ಪಿ.ಎಂ ಸ್ವನಿಧಿ ಮತ್ತು ಪರಿಹಾರ ಧನದ ಚೆಕ್ ಸೇರಿದಂತೆ ವಿವಿಧ ಸವಲತ್ತುಗಳ ಫಲಾನುಭವಿಗಳಿಗೆ ಬಿ. ಸಿ. ರೋಡ್‌ನ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.

Read More

ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜ್ ಕಟ್ಟಡ ಉದ್ಘಾಟನೆ

ರೂ. 1 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡ ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜ್ ಕಟ್ಟಡದ ಉದ್ಘಾಟನೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮಾಡಿದರು.

Read More

ಕೋವಿಡ್ ವಾರಿಯರ್ಸ್‌ಗಳಿಗೆ ಅಭಿನಂದನಾ ಕಾರ್ಯಕ್ರಮ

ಕೋವಿಡ್ ಸಂಕಷ್ಟದ ಸಮಯದಲ್ಲಿ ಹಗಳಿರುಳು ದುಡಿದ ಬಂಟ್ವಾಳ ತಾಲೂಕಿನ ಕೋವಿಡ್ ವಾರಿಯರ್ಸ್‌ಗಳಾದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಸಲ್ಲಿಸಿದ ಸೇವೆಗಾಗಿ ಅಭಿನಂದಿಸುವ ಕಾರ್ಯಕ್ರಮ ಒಡ್ಡೂರು ಫಾರ್ಮ್ಸ್‌ನಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ಮತ್ತು ಪ್ರಮುಖರು ಭಾಗವಹಿಸಿದರು.

Read More

ರಾಯಿ ಗ್ರಾ. ಪಂ. ಸ್ವಚ್ಛ ಸಂಕೀರ್ಣ ಮತ್ತು ಹಿಂದೂ ರುದ್ರಭೂಮಿ ಲೋಕಾರ್ಪಣೆ

ರಾಯಿ ಗ್ರಾಮ ಪಂಚಾಯತ್‌ನ ಸ್ವಚ್ಛ ಸಂಕೀರ್ಣ ಮತ್ತು ಹಿಂದೂ ರುದ್ರಭೂಮಿಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಲೋಕಾರ್ಪಣೆ ಮಾಡಿದರು.

Read More

‘ಬಿಜೆಪಿ ಹಿರಿಯರ ಸಮ್ಮಿಲನ’ ಕಾರ್ಯಕ್ರಮದ ಪೂರ್ವತಯಾರಿ ಸಭೆ

ನವೆಂಬರ್ 15 ಮಂಗಳವಾರದಂದು ಒಡ್ಡೂರು ಫಾರ್ಮ್ಸ್ ನಲ್ಲಿ ನಡೆಯಲಿರುವ ಬಿಜೆಪಿ ಹಿರಿಯರ ಸಮ್ಮಿಲನ ಕಾರ್ಯಕ್ರಮದ ಪೂರ್ವತಯಾರಿ ಸಭೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ನಡೆಸಿದರು. ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ,ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಪ್ರ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ವಿಟ್ಲಪಡ್ನೂರು ಮತ್ತು ಬಿಜೆಪಿ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

Back To Top
Highslide for Wordpress Plugin