Rajesh Naik

ರಾಷ್ಟ್ರೀಯ ಕುಟುಂಬ ಯೋಜನೆಯಡಿ ಸಹಾಯಧನ ನೇರ ಬ್ಯಾಂಕ್ ಖಾತೆ ವರ್ಗಾವಣೆ

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 951 ಫಲಾನುಭವಿಗಳಿಗೆ ರಾಷ್ಟ್ರೀಯ ಕುಟುಂಬ ಯೋಜನೆಯಡಿ ತಲಾ 20,000 ರೂ. ನಂತೆ ಸಹಾಯಧನ ಮತ್ತು 379 ಫಲಾನುಭವಿಗಳಿಗೆ ಅಂತ್ಯಸಂಸ್ಕಾರ ಸಹಾಯಧನ ಯೋಜನಯಡಿ ತಲಾ 5,000 ರೂ. ನಂತೆ ಒಟ್ಟು 2 ಕೋಟಿ 9 ಲಕ್ಷ ರೂ. ಸಹಾಯಧನವನ್ನು ನೇರ ಬ್ಯಾಂಕ್ ಖಾತೆ ವರ್ಗಾವಣೆಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಚಾಲನೆ ನೀಡಿದರು.

Read More

ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಚಾಲನೆ

ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಚಾಲನೆ ನೀಡಿದರು. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ಥಳೀಯರ ಸಹಕಾರದೊಂದಿಗೆ ಚೆಂಡಿನ ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯಕ್ಕೆ ಎಂಒ4 ಭದ್ರಾ ತಳಿಯನ್ನು ಬಿತ್ತನೆ ಮಾಡಲಾಗಿದೆ. ಯುವಕರು ಭತ್ತದ ಬೇಸಾಯದಲ್ಲಿ ತೊಡಗಲು ಪ್ರೇರಣೆ ನೀಡುವ ನಿಟ್ಟಿನಲ್ಲಿ ಪ್ರತಿವರ್ಷ ಈ ಕಾರ್ಯ ಮಾಡಲಾಗುತ್ತಿದೆ.

Read More

ಬಂಟ್ವಾಳದ ನದಿ ತೀರದ ಪ್ರದೇಶಗಳಿಗೆ ಭೇಟಿ, ಪರಿಶೀಲನೆ

ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದ್ದಂತೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಬಂಟ್ವಾಳದ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನದಿ ತೀರದ ಜನರು ಹೆಚ್ಚು ಜಾಗರೂಕತೆಯಿಂದ ಇರುವಂತೆ ಹಾಗೂ ನೀರು ನುಗ್ಗುವಂತ ಜಾಗದ ಮನೆಯವರನ್ನು ‌ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವಂತೆ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಕು.ವಿಜೇತ, ಸಿಬ್ಬಂದಿ ಸದಾಶಿವ ಕೈಕಂಬ, ರೂಪೇಶ್ ಬೆಂಜನಪದವು ಉಪಸ್ಥಿತರಿದ್ದರು.

Read More

ಪಾಕೃತಿಕ ವಿಕೋಪ : ಮುನ್ನೆಚ್ಚರಿಕೆ ಕ್ರಮ ಬಗ್ಗೆ ಅಧಿಕಾರಿಗಳ ಜೊತೆ ಸಭೆ

ತಾಲೂಕಿನಲ್ಲಿ ಪಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ಕ್ರಮ ಬಗ್ಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು. ಮಳೆ ಹಾನಿಯಿಂದ ಜನರ ಜೀವಕ್ಕೆ ಅಪಾಯವಾಗುವ ರೀತಿಯ ಸನ್ನಿವೇಶಗಳು ಇದ್ದರೆ, ಅದಕ್ಕೆ ಪೂರ್ವಭಾವಿಯಾಗಿ ಅಂತಹ ಕುಟುಂಬಗಳನ್ನು ‌ಬೇರೆ ಕಡೆಗೆ ಸ್ಥಳಾಂತರ ಮಾಡಿ ಅವರಿಗೆ ಸೂಕ್ತ ವ್ಯವಸ್ಥೆ ‌ಕಲ್ಪಿಸಬೇಕು ಮಳೆಗಾಲದಲ್ಲಿ ಉಂಟಾಗಬಹುದಾದ ಸಮಸ್ಯೆಯನ್ನು ಪರಿಹರಿಸಲು ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಲು ಸೂಚಿಸಲಾಯಿತು.

Read More

ರಬ್ಬರ್ ಟ್ಯಾಪಿಂಗ್ ‌ಕಾರ್ಮಿಕ ಮೃತ; ಘಟನಾ ಸ್ಥಳಕ್ಕೆ ಭೇಟಿ

ಗುಡ್ಡ ಜರಿದು ಶೆಡ್ ನೊಳಗೆ ರಬ್ಬರ್ ಟ್ಯಾಪಿಂಗ್ ‌ಕಾರ್ಮಿಕರು ಸಿಲುಕಿಕೊಂಡು ಮೃತಪಟ್ಟ ಪಂಜಿಕಲ್ಲು ಗ್ರಾಮದ ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ರೊಂದಿಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಭೇಟಿ ನೀಡಿದರು.

Read More

ಕಳ್ಳಿಗೆ : ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆತ್ತರಕೆರೆ ಕಳ್ಳಿಗೆಯಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮತ್ತು ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ ಮಾಡಿದರು.

Read More

ಪೆರಾಜೆ : ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆ ಭೇಟಿ

ಪೆರಾಜೆ ಗ್ರಾಮದ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆ ಭೇಟಿ, ಕಾರ್ಯಕರ್ತರ ಸಮಾವೇಶ ಮತ್ತು ಜನಸಂಘದ ಕಾರ್ಯಕರ್ತರಾಗಿ ದುಡಿದ ಹಿರಿಯ ಕಾರ್ಯಕರ್ತರಿಗೆ ಸನ್ಮಾನ ನಡೆಸಲಾಯಿತು.

Read More

ಪೆರಾಜೆ : 1.27 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ

ಪೆರಾಜೆ ಗ್ರಾಮದಲ್ಲಿ 1.27 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸವನ್ನು ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ನೆರವೇರಿಸಿದರು.

Read More

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಶ್ರೀರಾಮ ಸೆಕೆಂಡರಿ ಸ್ಕೂಲ್ ಉದ್ಘಾಟನೆ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಶ್ರೀರಾಮ ಸೆಕೆಂಡರಿ ಸ್ಕೂಲ್ ಅನ್ನು ವಿದ್ಯಾಕೇಂದ್ರದ ಪದವಿ ಸಭಾಂಗಣದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ತಿಲಕ ಹಾಕಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಭಗವದ್ಗೀತೆ ಹದಿನೆಂಟು ಅಧ್ಯಾಯಗಳನ್ನು ಪೂರ್ತಿ ಕಂಠಪಾಠ ಮಾಡಿದ ವಾಸವಿ. ಕೆ.ಸಿ. ಅವರನ್ನು ಗೌರವಿಸಲಾಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಉಪಸ್ಥಿತರಿದ್ದರು.

Read More

94C ಮತ್ತು 94CC ಮನೆ ನಿವೇಶನ ಹಕ್ಕು ಪತ್ರ, ದಿವ್ಯಾಂಗ ವ್ಯಕ್ತಿಗಳಿಗೆ ಕೃತಕ ಉಪಕರಣ ಹಾಗೂ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ

ಸ್ಪರ್ಶ ಕಲಾಮಂದಿರ ಬಿ. ಸಿ. ರೋಡ್ ನಲ್ಲಿ ಕಂದಾಯ ಇಲಾಖೆಯ ವತಿಯಿಂದ 94C ಮತ್ತು 94CC ಮನೆ ನಿವೇಶನ ಹಕ್ಕು ಪತ್ರ ವಿತರಣೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ಬಸವ ವಸತಿ ಯೋಜನೆ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ 2060 ಮನೆ ಮಂಜೂರಾಗಿದ್ದು ಅರ್ಹ ಫಲಾನುಭವಿಗಳಿಗೆ ಕಾರ್ಯಾದೇಶ ವಿತರಣೆ ಮತ್ತು ಮಹಿಳಾ ಮತ್ತುಮಕ್ಕಳ ಅಭಿವೃದ್ದಿ ಇಲಾಖೆ ಬಂಟ್ವಾಳ ಮತ್ತು ALIMCO ವತಿಯಿಂದ ತಪಾಸಣೆಗೊಳಗಾದ ಹಾಗೂ udid card ಹೊಂದಿರುವ […]

Read More

Back To Top
Highslide for Wordpress Plugin